– ವಾಲ್ಮೀಕಿ ನಿಗಮ ಪ್ರಕರಣ ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ಎಂದು ಸಚಿವ ಆರೋಪಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Case) ಪ್ರಕರಣದ ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪಿಸಿದ್ದಾರೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಹೆಸರು ಹೇಳಿ ಎಂದು ಒತ್ತಡ ಹಾಕಲಾಗುತ್ತಿದೆ. ಹಣ ಬಳ್ಳಾರಿ ಚುನಾವಣೆಗೆ ಬಳಕೆಯಾಗಿದೆ ಅಂತಾ ಹೇಳಲು ಒತ್ತಡ ಹಾಕಲಾಗುತ್ತಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: 7 ದಿನಗಳ ಕಾಲ ಜಿ.ಟಿ ಮಾಲ್ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆಬೋವಿ ನಿಗಮದಲ್ಲಿ 120 ಕೋಟಿ ಹಗರಣ ಆಗಿದೆ. ಅದರ ಬಗ್ಗೆ ಇ.ಡಿ ಯಾಕೆ ಕಾಳಜಿ ವಹಿಸಿಲ್ಲ? ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣದಲ್ಲಿ ಇ.ಡಿ ಯಾಕೆ ಗಮನ ಹರಿಸಿಲ್ಲ. ಕೆಐಎಡಿಬಿ ದುಡ್ಡು ಸೇಲಂಗೆ ಹೋಗಿದೆ. ಇದರ ಬಗ್ಗೆ ಯಾಕೆ ಇ.ಡಿ ಆಸಕ್ತಿ ವಹಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿಯವರ ಸ್ಟ್ಯಾಂಡರ್ಡ್‌ ಆಪರೇಟಿಂಗ್ ಪ್ರೊಸಿಜರ್ ಇದು. ಕಳೆದ 10 ವರ್ಷಗಳಲ್ಲಿ ಎಷ್ಟು ಸರ್ಕಾರಗಳನ್ನು ಬಿಜೆಪಿಯವರು ಬೀಳಿಸಿದ್ದಾರೆ ನೋಡಿ. 2016ರಲ್ಲಿ ಉತ್ತರಾಖಂಡ, 2019ರಲ್ಲಿ ಕರ್ನಾಟಕ, ಗುಜರಾತ್‌ನಲ್ಲಿ ನಮ್ಮ ಎಂಎಲ್‌ಎಗಳ ಖರೀದಿ ಮಾಡಿದ್ರು. ಸಿಕ್ಕಿಂನಲ್ಲಿ ಎಂಎಲ್‌ಎಗಳ ಖರೀದಿ. 2014 ರಿಂದ 440 ಎಂಎಲ್‌ಎಗಳನ್ನು ಖರೀದಿ ಮಾಡಲಾಗಿದೆ. ಮೆಜಾರಿಟಿ ಇದ್ರೂ ಕೂಡ ಕೇಂದ್ರದ ಏಜೆನ್ಸಿಗಳನ್ನು ಬಳಸಿಕೊಂಡು ಸರ್ಕಾರಗಳನ್ನು ಕೆಡವಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿಮಣಿಪುರ, ಹಿಮಾಚಲ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ ಹೀಗೆ 60 ಬಾರಿ ಶಾಸಕರ ಖರೀದಿ ನಡೆದಿದೆ. ಯಾರು ಹೋಗೋದಿಲ್ಲ, ಅವರ ಮೇಲೆ ಹೆಚ್ಚು ಒತ್ತಡ ತರುವುದು. ಮಾಜಿ ಸಿಎಂ ಯಡಿಯೂರಪ್ಪ ಮೇಲೆ ಐಟಿ, ಇ.ಡಿ ಕೇಸ್ ಇದೆ. 2019 ರಿಂದ ಇದುವರೆಗೆ ಯಡಿಯೂರಪ್ಪ ಮೇಲೆ ಯಾವುದೇ ವಿಚಾರಣೆ ಯಾಕೆ ನಡೆಯುತ್ತಿಲ್ಲ. ರೆಡ್ಡಿ ಬ್ರದರ್ಸ್ ಮೇಲೆ ಐಟಿ ಕೇಸ್ ಇತ್ತು. ಆದರೆ ಈಗ ಅವರು ಪಕ್ಷ ಸೇರಿದ ಮೇಲೆ ಯಾವುದೂ ಇಲ್ಲ. ಬಿಜೆಪಿ ಸೇರಿದರೆ ಸಾಥ್ ಖೂನ್ ಮಾಫ್ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.14 ವಿರೋಧ ಪಕ್ಷದವರು ಸುಪ್ರೀಂ ಕೋರ್ಟ್‌ನಲ್ಲಿ ಪಿಟಿಷನ್ ಹಾಕಿದ್ದಾರೆ. ಇದಕ್ಕೆ ಉತ್ತರ ಕೇಂದ್ರ ನೀಡಿಲ್ಲ. 3000 ರೇಡ್‌ಗಳನ್ನು ಐಟಿ ಇಡಿ ಮಾಡಿದೆ. ಅದರಲ್ಲಿ ಕೇವಲ 25% ಪ್ರಾಸಿಕ್ಯುಷನ್‌ಗೆ ಹೋಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ಜೈಲೂಟದಿಂದ ಇಂದು ಮುಕ್ತಿ ಸಿಗುತ್ತಾ? – ಹೈಕೋರ್ಟ್‌ನಲ್ಲಿ ಭವಿಷ್ಯSign in to your account
Username or Email Address


Password

 Remember Me


