ಬೆಂಗಳೂರು: ಉತ್ತಮ ಮಳೆಯಿಂದಾಗಿ (Rain) ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಹೆಚ್ಚಿನ ಒಳ ಹರಿವು ಬರುತ್ತಿದ್ದು, ಜು.19ರಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ಶಿವರಾಜ್ ತಂಗಡಗಿ (Shivaraj S Tangadagi) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಈ ವಿಚಾರವಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಪ್ರಸಕ್ತ ಸಾಲಿನಲ್ಲಿ ಮುಂಗಾರು- ಹಂಗಾಮಿನ ಮಳೆ ಚೆನ್ನಾಗಿ ಆಗುತ್ತಿದೆ. ಇದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳ ಹರಿವು ಪ್ರಾರಂಭವಾಗಿದೆ. ಇದನ್ನೂ ಓದಿ: ಮುಡಾ, ವಾಲ್ಮೀಕಿ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – ಕಟ್ಟೆಯೊಡೆದ ಆಕ್ರೋಶ!ಜು.18ರ ವೇಳೆಗೆ ಜಲಾಶಯದಲ್ಲಿ 46.802 ಟಿಎಂಸಿ ನೀರು ಸಂಗ್ರಹ ಇದ್ದು, ಒಳ ಹರಿವಿನ 1,04,060 ಕ್ಯುಸೆಕ್ ಇದೆ. ಇದೇ ಪ್ರಮಾಣದಲ್ಲಿ ಒಳ ಹರಿವು ಮುಂದುವರಿದಲ್ಲಿ ವಾರದಲ್ಲಿ ಜಲಾಶಯದ ಭರ್ತಿಯಾಗುವ ನಿರೀಕ್ಷೆ ಇದೆ. ಸದ್ಯಕ್ಕೆ ಒಳಹರಿವು ಉತ್ತಮವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸದೇ ರೈತರ ಹಿತದೃಷ್ಟಿಯಿಂದ ಮುಂಗಡವಾಗಿ ನೀರು ಬಿಡುಗಡೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಎಡದಂಡೆ ಮುಖ್ಯ ಕಾಲುವೆಗೆ ಜು.19 ರಿಂದ 4,100 ಕ್ಯುಸೆಕ್‍ನಂತೆ, ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆಗೆ ಜು.19 ರಿಂದ 650 ಕ್ಯುಸೆಕ್‍ನಂತೆ, ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆಗೆ ಜು.19 ರಿಂದ 1,300 ಕ್ಯುಸೆಕ್‍ನಂತೆ ಹಾಗೂ ಕಾರ್ಖಾನೆಗಳಿಗೆ 60 ಕ್ಯುಸೆಕ್‍ನಂತೆ ನೀರು ಹರಿಸಲಾಗುವುದು. ಇನ್ನು ರಾಯಬಸವಣ್ಣ ಕಾಲುವೆಗೆ ಈಗಾಗಲೇ ಜೂ.1 ರಿಂದ 180 ಕ್ಯುಸೆಕ್‍ನಂತೆ ನೀರು ಹರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್Sign in to your account
Username or Email Address


Password

 Remember Me


