ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು (Dengue Case) ವರದಿಯಾಗಿದ್ದು, ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ.ಬೆಂಗಳೂರು ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಕಳೆದ 24 ಗಂಟೆಗಳಲ್ಲಿ 2,704 ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 437 ಜನರಿಗೆ ಪ್ರಕರಣ ಧೃಢವಾಗಿದೆ. ಈವರೆಗೆ ಒಟ್ಟು 63,741 ಮಂದಿಗೆ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ. ಇದನ್ನೂ ಓದಿ: ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆಯಾವ ವಯಸ್ಸಿನವರಲ್ಲಿ ಹೆಚ್ಚಿ ಕೇಸ್‌ ಪತ್ತೆ? 
ಕಳೆದ 24 ಗಂಟೆಯಲ್ಲಿ 2,704 ಮಂದಿಗೆ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 1 ವರ್ಷದೊಳಗಿನ 7 ಮಕ್ಕಳು, 1 ರಿಂದ 18 ವರ್ಷ ವಯಸ್ಸಿನ 154 ಮಕ್ಕಳು ಹಾಗೂ 18 ವರ್ಷ ಮೇಲ್ಪಟ್ಟ 276 ಮಂದಿ ಸೇರಿದಂತೆ ಒಟ್ಟು 437 ಕೇಸ್‌ ಪತ್ತೆಯಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಒಬ್ಬ ಭಯಂಕರ ಸರ್ವಾಧಿಕಾರಿ, ಭ್ರಷ್ಟಾಚಾರಿ -‌ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್‍ಗೆ ಸಾಧ್ಯವೇ?: ಜೋಶಿಎಲ್ಲೆಲ್ಲಿ ಎಷ್ಟು ಕೇಸ್‌?
ಬಿಎಂಪಿ ವ್ಯಾಪಿಯಲ್ಲಿ 165, ಬೆಂಗಳೂರು ನಗರ 10, ಬೆಂಗಳೂರು ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತುಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 1, ಕಲಬುರಗಿ 20, ಬೀದರ್‌ 10, ಬಳ್ಳಾರಿ 4, ವಿಜಯನಗರ 1, ಕೊಪ್ಪಳ 3, ಮೈಸೂರು 17, ಮಂಡ್ಯ 47, ಹಾಸನ 6, ಉಡುಪಿ 10, ಚಿಕ್ಕಮಗಳೂರು 10, ಕೊಡಗು 9 ಕೇಸ್‌ ಪತ್ತೆಯಾಗಿವೆ. ಶುಕ್ರವಾರ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಒಟ್ಟು ಮರಣ ಸಂಖ್ಯೆ 7 ಇದೆ.Sign in to your account
Username or Email Address


Password

 Remember Me


