ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) ಬ್ಯಾಂಕ್‌ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ (Nagendra) ಪ್ರತಿಕ್ರಿಯೆ ನೀಡಿದರು.ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳಿಗೆ, ನನಗೇನೂ ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಅವರು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್‌ – ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತು. ಅಧಿಕಾರಿಗಳು, ಬಸನಗೌಡ ದದ್ದಲ್‌ ಅವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಈ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್‌ ಅವರನ್ನು ಇ.ಡಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ನಂತರ ವಾಪಸ್‌ ಕಳುಹಿಸಿತ್ತು. ಇತ್ತ ಬಸನಗೌಡ ಅವರ ವಿಚಾರಣೆಯೂ ನಡೆದಿತ್ತು. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ – ಸಿಐಎಸ್‌ಎಫ್‌ ಅಧಿಕಾರಿಗೆ ಸ್ಪೈಸ್‌ಜೆಟ್‌ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷSign in to your account
Username or Email Address


Password

 Remember Me


