ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ (Valmiki Scam) ಸಂಬಂಧ ಇಡಿ (ED) ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ.ಶ್ರೀರಾಮುಲು (B Sriramulu) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರಾಜ್ಯ ಬಿಜೆಪಿ (BJP) ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, `ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ’ ಅನ್ನೋ ತರ ಈ ಸರ್ಕಾರ ವರ್ತಿಸುತ್ತಿದೆ. ಕರ್ನಾಟಕದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಬುಡಕಟ್ಟು ಸಮುದಾಯ, ಪರಿಶಿಷ್ಟ ಸಮುದಾಯಕ್ಕೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬಲಪಡಿಸುವ ಉದ್ದೇಶದಿಂದ ರಚಿಸಲಾಗಿತ್ತು ಎಂದು ನೆನಪಿಸಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ; ಜು.15 ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲಾ ಎಸ್ಸಿ, ಎಸ್ಟಿ ಸಮುದಾಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಹಲವು ತಿಂಗಳಿನಿಂದ ಬಿಜೆಪಿ ಹೋರಾಟ ನಡೆದಿದೆ. ನಾಗೇಂದ್ರ ಅವರ ಮನೆಯ ಮೇಲೆ, ಆಸ್ತಿಗಳ ಮೇಲೆ ಇ.ಡಿ ದಾಳಿ ಮಾಡಿದೆ. ಅನೇಕ ದಾಖಲಾತಿಗಳ ಪರಿಶೀಲನೆ ನಡೆದಿದೆ ಎಂದು ವಿವರಿಸಿದರು. ಇದನ್ನೂ ಓದಿ: ಆಕಳು ಮೈ ತೊಳೆಯಲು ನದಿಗೆ ಹೋಗಿದ್ದ ಯುವಕ ನೀರುಪಾಲುಒಂದೆಡೆ ಎಸ್‌ಐಟಿ ವಿಚಾರಣೆಯೂ ಇದೆ ಎಂದ ಅವರು, ಇಡಿ 18 ಕಡೆಗಳಲ್ಲಿ ದಾಳಿ ನಡೆಸಿದೆ. ಯೂನಿಯನ್ ಬ್ಯಾಂಕಿನವರು ಸಿಬಿಐಗೆ ದೂರು ಕೊಟ್ಟ ಕಾರಣ ಅದರ ಆಧಾರದಲ್ಲಿ ಇ.ಡಿ ದಾಳಿ ನಡೆಯುತ್ತಿರಬಹುದು. ವಾಲ್ಮೀಕಿ ನಿಗಮದಿಂದ ನಾಗೇಂದ್ರರ ಪಿ.ಎ ಆಗಿದ್ದ ಹರೀಶ್ ಎಂಬವರ ಖಾತೆಗೆ 80 ಲಕ್ಷ ಹಣ ವರ್ಗಾವಣೆ ಆಗಿದೆ ಎಂದ ಅವರು, ಇ.ಡಿಯನ್ನು ಆಹ್ವಾನಿಸಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ದಾಳಿ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಸರ್ಕಾರವು ಈ ದೊಡ್ಡ ಹಗರಣದ ಭಾಗೀದಾರ ಎಂದು ಆರೋಪಿಸಿದರು. ರಾಜ್ಯದ ಜನರು ನಾಚಿಕೆ ಇಲ್ಲದ ಸರ್ಕಾರ ಎನ್ನುತ್ತಿದ್ದಾರೆ. ಕಳ್ಳರ ಸರ್ಕಾರ ಎಂದು ಮಾತನಾಡುತ್ತಿದ್ದಾರೆ. ದರೋಡೆ ನಡೆದ ನಂತರ ಕಳ್ಳರನ್ನು ಹಿಡಿಯಬೇಕಿದೆ. ಇ.ಡಿಯವರು ಬಂದು ಕಳ್ಳರ ಉಪಾಧ್ಯಕ್ಷನನ್ನು ಹಿಡಿದಿದ್ದಾರೆ. ಅಧ್ಯಕ್ಷರು ಯಾರು ಎಂದು ಗೊತ್ತಾಗಿಲ್ಲ. ಅಧ್ಯಕ್ಷರ ಪತ್ತೆಗೆ ಇ.ಡಿ ಮುಂದಾಗಿದೆ ಎಂದರು. ಇದನ್ನೂ ಓದಿ: ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ರಾಜು ಗೌಡ, ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಶಾಂತರಾಮ ಸಿದ್ದಿ, ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು ಪಾಲ್ಗೊಂಡಿದ್ದರು. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್‌ – ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಸೂಚನೆ






 Advertisement 




Sign in to your account
Username or Email Address


Password

 Remember Me


