– ಬಸನಗೌಡ ದದ್ದಲ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿರಾಯಚೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ(Karnataka Maharshi Valmiki Scheduled Tribe Development Corporation Ltd) 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ನಡೆದಿರುವ ಜಾರಿ ನಿರ್ದೇಶನಾಲಯ (ED) ದಾಳಿ ಎರಡನೇ ದಿನವೂ ಮುಂದುವರಿದಿದೆ.ವಾಲ್ಮೀಕಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದದ್ದಲ (Basanagouda Daddal) ಹಾಗೂ ಅವರ ಮಾಜಿ ಪಿಎ ಪಂಪಣ್ಣ (Pampanna) ಮನೆಯಲ್ಲಿ ಇಡಿ ಅಧಿಕಾರಿಗಳು ಬೀಡು ಬಿಟ್ಟಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.ರಾಯಚೂರು ತಾಲೂಕು ಪಂಚಾಯತ್‌ನಲ್ಲಿ ಕೇಸ್ ವರ್ಕರ್ ಆಗಿ ಕೆಲಸ‌ ಮಾಡುತ್ತಿರುವ ಪಂಪಣ್ಣ ರಾಥೋಡ್ ಕತೆ ನಿಜಕ್ಕೂ ರೋಚಕವಾಗಿದೆ. ಕಡು ಬಡತನದಲ್ಲಿ ಬೆಳೆದು ಬಂದ ಪಂಪಣ್ಣ ತಾನು ಮಹಾ ಬುದ್ದಿವಂತ ಎನ್ನುವುದನ್ನು ಈ ಹಿಂದೆಯೇ ಸಾಬೀತು ಮಾಡಿದ್ದಾರೆ. ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ನಲ್ಲಿ 50 ಲಕ್ಷ ಗೆಲ್ಲುವ ಮೂಲಕ ಪಂಪಣ್ಣ ಇಡೀ ಕರ್ನಾಟಕಕ್ಕೆ ಪರಿಚಯವಾಗಿದ್ದರು.  ಇದನ್ನೂ ಓದಿ: ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂದೇವದುರ್ಗ ಮೂಲದ ಪಂಪಣ್ಣ ಸ್ಮಶಾನದಲ್ಲಿ ಇಡುವ ಎಡೆಯನ್ನು ತಿಂದು ಬೆಳೆದವರು ಅನ್ನೋ ವಿಚಾರ ಸಂಚಲನ ಮೂಡಿಸಿತ್ತು.2012 ರಲ್ಲಿ ನಟ ಪುನೀತ್ ರಾಜ್ ಕುಮಾರ್ (Puneeth Rajkumar) ನಡೆಸಿಕೊಡ್ತಿದ್ದ ಕನ್ನಡ ಕೋಟ್ಯಧಿಪತಿ (Kannada Kotyadipathi) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಪಂಪಣ್ಣ ಕೊನೆಯವರೆಗೂ ಉಳಿದಿದ್ದರು. ಈ ಶೋ ನಲ್ಲಿ 50 ಲಕ್ಷ ರೂ. ಗೆದ್ದಿದ್ದರು. ಒಂದು ಕೋಟಿ ರೂಪಾಯಿಗೆ ಕೇಳಿದ ಕೊನೆ ಪ್ರಶ್ನೆವರೆಗೂ ಸೇಫ್ ಆಗಿ ಆಡಿದ್ದ ಪಂಪಣ್ಣ ಬಳಿಕ ಕನ್ನಡ ಕೋಟ್ಯಧಿಪತಿಯಾಗಲು ಇದ್ದ ಕೊನೆ ಪ್ರಶ್ನೆಗೆ ಉತ್ತರಿಸಲು ಆಗದೇ ಆಟದಿಂದ ನಿರ್ಗಮಿಸಿ 50 ಲಕ್ಷ ರೂಪಾಯಿ ಪಡೆದಿದ್ದರು.2012 ರಲ್ಲಿ ಶಿಕ್ಷಕ ವೃತ್ತಿಯಲ್ಲಿದ್ದ ಪಂಪಣ್ಣ 50 ಲಕ್ಷ‌ ರೂ. ಗೆದ್ದ ಬಳಿಕ ಅಂದಿನ ರಾಯಚೂರು ಸಂಸದರಿಗೆ ಸರ್ಕಾರಿ ಆಪ್ತ ಸಹಾಯಕರಾಗಿ ಸೇರಿಕೊಂಡರು. ಬಳಿಕ ಪಿಡಿಓ ಹುದ್ದೆಗೆ ನಿಯೋಜನೆಗೊಂಡರು. ಕಾರ್ಯಕ್ಕೆ ಹಾಜರಾಗದೇ ಜನಪ್ರತಿನಿಧಿಗಳ ಆಪ್ತ ಸಹಾಯಕ ಕೆಲಸವನ್ನೇ ಹುಡುಕಿಕೊಂಡು ಮಾಡತೊಡಗಿದ್ದರು. ಶಾಸಕ ಬಸನಗೌಡ ದದ್ದಲ್‌ ಅವರಿಗೂ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು. ಸದ್ಯ ರಾಯಚೂರಿನ (Raichuru) ಬಿಚ್ಚಾಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. ಆದರೆ ಇಲ್ಲೂ ಕೆಲಸಕ್ಕೆ ಹಾಜರಾಗದೇ ತಾಲೂಕು ಪಂಚಾಯತಿ ಕಚೇರಿಯಲ್ಲಿ ಕೇಸ್ ವರ್ಕರ್ ಆಗಿ ಉಳಿದಿದ್ದಾರೆ. ರಾಯಚೂರಿನ ನೂತನ ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಆಪ್ತ ಸಹಾಯಕರಾಗಿ ಹೋಗಲು ಪ್ರಯತ್ನ ನಡೆಸಿದ್ದರು. ಆದರೆ ವಾಲ್ಮೀಕಿ ನಿಗಮದ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದರಿಂದ ಆ ನೂತನ ಎಂಎಲ್‌ಸಿ ಪಂಪಣ್ಣನನ್ನ ತಮ್ಮ ಪಿಎ ಆಗಿ ಸೇರಿಸಿಕೊಂಡಿಲ್ಲ.ವಾಲ್ಮೀಕಿ ನಿಗಮದ ಹಗರಣದಲ್ಲಿ 50 ಲಕ್ಷ ರೂಪಾಯಿ ಪಡೆದಿರುವ ಆರೋಪ ಹಿನ್ನೆಲೆ ನಗರದ ಆಜಾದ್ ನಗರದಲ್ಲಿರುವ ರಾಯಲ್ ಫೋರ್ಟ್ ಅಪಾರ್ಟ್ಮೆಂಟ್‌ನ ಪಂಪಣ್ಣ ಫ್ಲಾಟ್ ಮೇಲೆ ದಾಳಿ ಮಾಡಿರುವ ಇಡಿ ಅಧಿಕಾರಿಗಳು ಬುಧವಾರದಿಂದ ತಪಾಸಣೆ ನಡೆಸುತ್ತಿದ್ದಾರೆ. ಪಂಪಣ್ಣನ ಫ್ಲಾಟ್ ‌ನಲ್ಲಿ ಮಹತ್ವದ ದಾಖಲೆಗಳು ಸಿಕ್ಕಿದ್ದು ಅಧಿಕಾರಿಗಳು ದಾಖಲೆಗಳನ್ನ ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ. Sign in to your account
Username or Email Address


Password

 Remember Me


