ಬೆಂಗಳೂರು/ರಾಮನಗರ: ರಾಮನಗರ (Ramanagara) ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂಗೆ ಮಹಿಳೆ ಬಲಿರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರದ ಕರಾಳಮುಖ. ಕೆಲವರ ತುಷ್ಟೀಕರಣದ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಕಟುವಾಗಿ ಟೀಕಿಸಿದರು. ಇದನ್ನೂ ಓದಿ: ಖರ್ಗೆಗೆ ಒಂದು ಕಡೆ ಲ್ಯಾಂಡ್‌ ಅಲಾಟ್‌ ಆಗಿದೆಯಂತೆ: ರಮೇಶ್‌ ಜಿಗಜಿಣಗಿ ಹೊಸ ಬಾಂಬ್‌ವಿಧಾನಸೌಧದ ಶಿಲ್ಪಿ ಕೆಂಗಲ್ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಹೆಚ್.ಡಿ.ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. ನಮ್ಮ ರಾಮನಗರ ನಮ್ಮ ಹೆಮ್ಮೆ ಎಂದು ಹೇಳಿದರು. ಇದನ್ನೂ ಓದಿ: ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ






 Advertisement 




Sign in to your account
Username or Email Address


Password

 Remember Me


