ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರ ಆಪ್ತನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆತಂದಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!ಅಕ್ರಮವಾಗಿ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ಅಧಿಕಾರಿಗಳು ಬಂಧಿಸಿದ್ದಾರೆ.ಮಾಜಿ ಸಚಿವ ನಾಗೇಂದ್ರ ಅವರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆಸಿತ್ತು. ನಾಗೇಂದ್ರ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್; ಮಾಜಿ ಸಚಿವ ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿSign in to your account
Username or Email Address


Password

 Remember Me


