ಬೆಂಗಳೂರು: ರಾಜಪ್ಪ ಎನ್ನುವ ಮೇಸ್ಟ್ರು ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ಶಾಲೆಗೆ (School) ಸೇರಿಸದಿದ್ದರೆ ನಾನು ಮುಖ್ಯಮಂತ್ರಿಯೇ (Chief Minister) ಆಗುತ್ತಿರಲಿಲ್ಲ ಎಂದು‌ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬಗ್ಗೆ ಚರ್ಚೆ ನಡೆಸಿದ ಅವರು ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಬೇಕು. ಸಾಮಾಜಿಕ-ಆರ್ಥಿಕ ಕಾರಣದಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಕಾಳಜಿ ಇಟ್ಟು ಶಿಕ್ಷಣ (Education) ಒದಗಿಸಿ ಎಂದು ಸೂಚನೆ ನೀಡಿದರು.  ಇದನ್ನೂ ಓದಿ: ಅಧಿಕಾರಿಗಳ ಉದಾಸೀನದಿಂದ ಜನರ ಪ್ರಾಣ ಹೋದರೆ ಸಹಿಸಲ್ಲ: ಸಿಎಂಬಜೆಟ್‌ನಲ್ಲಿ ಘೋಷಿಸಿರುವಂತೆ ಎರಡು ಸಾವಿರ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್‌ಆರ್‌ (CSR) ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿ ಖಾಸಗಿ ಕಂಪನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8,163 ಕೋಟಿ ರೂ. ಕಡ್ಡಾಯವಾಗಿ ಸಿಎಸ್‌ಆರ್‌ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ ಕಂಪನಿಗಳು ಈ ಅವಧಿಯಲ್ಲಿ 4 ಲಕ್ಷ ಕೋಟಿ ರೂ. ಲಾಭ ಗಳಿಸಿವೆ. 1,190 ಕೋಟಿ ರೂ. ಕಳೆದ ವರ್ಷ ಸಿಎಸ್‌ಆರ್‌ ಅಡಿ ವೆಚ್ಚ ಮಾಡಿದ್ದು, ಶೇ.30ರಷ್ಟು ಮಾತ್ರ ಸಿಎಸ್‌ಆರ್‌ ಅಡಿ ಬಳಸುತ್ತಿವೆ ಎಂದು ತಿಳಿಸಿದರು. ಇದನ್ನೂ ಓದಿ: ಹತ್ರಾಸ್ ಸತ್ಸಂಗದಿಂದ ನಾಸಿಕ್‌ನ ಕುಂಭಮೇಳದವರೆಗೆ; ಭಾರತದಲ್ಲಿ ನಡೆದ ಕಾಲ್ತುಳಿತ ದುರಂತಗಳಿವುರಾಮನಗರ ಜಿಲ್ಲೆಯಲ್ಲಿ ಪೈಲೆಟ್‌ ಯೋಜನೆಯಾಗಿ ಆರಂಭಿಸಲಾಗಿದ್ದು, ಮೂರು ಪಂಚಾಯತ್‌ಗಳಿಗೆ ಒಂದು ಶಾಲೆಯಂತೆ ಈಗಾಗಲೇ 20 ಶಾಲೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಟೊಯೋಟಾ ಕಂಪನಿ ಒಂದೇ 20 ಕೋಟಿ ರೂ. ಸಿಎಸ್‌ಆರ್‌ ಅಡಿ ನಿಧಿ ಒದಗಿಸಿದ್ದಾರೆ. ನಾವು 3 ಎಕ್ರೆ ಜಮೀನು ಒದಗಿಸಬೇಕು. ಶಾಲೆಯ ಮಾದರಿಯನ್ನು ಮಾತ್ರ ನಾವು ಒದಗಿಸುತ್ತೇವೆ. ನಿರ್ಮಾಣ ಕಾರ್ಯವನ್ನು ಅವರೇ ಮಾಡುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಸಾವಿರ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ. ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6 ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.Sign in to your account
Username or Email Address


Password

 Remember Me


