ಬೆಂಗಳೂರು: ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಹೆಂಡತಿ ಸ್ವತಂತ್ರವಾಗಿ ತೀರ್ಮಾನ ಕೈಗೊಂಡಿದ್ದಾರೆ. ನನ್ನ ಜೊತೆಗೆ ಚರ್ಚೆ ಮಾಡಿಲ್ಲ. ಅವರ ಸಹೋದರ ನೀಡಿದ ಜಮೀನು ಅದು. ಮುಡಾದವರು ಅವರನ್ನು ಸ್ವಾಧೀನಕ್ಕೆ ಪಡೆದುಕೊಂಡು ಸೈಟ್ ಮಾಡಿ ಬೇರೆಯವರಿಗೆ ಹಂಚಿಕೆ ಮಾಡಿದ್ದರು. ಬದಲಿ ನಿವೇಶನವಾಗಿ ವಿಜಯ ನಗರದಲ್ಲಿ ನೀಡಿದ್ದರು. ಮುಡಾಗೆ ನಾವೇನು ಅಲ್ಲೇ ಕೊಡಿ ಎಂದು ಕೇಳಿರಲಿಲ್ಲ. ಅವರೇ ವಿಜಯನಗರದಲ್ಲಿ (Vijayanagara) ಕೊಟ್ಟಿದ್ದರು. ಆದರೆ ಈಗ ವಿವಾದದಿಂದ ಮನನೊಂದು ನನ್ನ ಯಜಮಾನರಿಗೆ ರಾಜಕೀಯ ತೇಜೋವಧೆ ಆಗುತ್ತಿದೆ. ಹಾಗಾಗಿ ಸೈಟ್ ಬೇಡವೇ ಬೇಡ ಎಂದು ವಾಪಸ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನೆಲಮಂಗಲ – ಹಿರಿಯ ಇತಿಹಾಸ ತಜ್ಞ ಗೋಪಾಲ ರಾವ್ ವಿಧಿವಶಮುಡಾ ಕೇಸ್‌ನಲ್ಲಿ (MUDA Scam) ಇಡಿ ಎಫ್‌ಐಆರ್ ದಾಖಲು ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾನೂನು ಏನಾದರೂ ಕ್ರಮ ಕೈಗೊಳ್ಳಲಿ. ಯಾವ ಆಧಾರದಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ ಗೊತ್ತಿಲ್ಲ. ಈ ಪ್ರಕರಣದಲ್ಲಿ ಹಣಕಾಸು ವರ್ಗಾವಣೆ ಆಗಿಲ್ಲ(ಮನಿ ಲ್ಯಾಂಡ್ರಿಗ್) ನನ್ನ ಪಾತ್ರ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದರು. ಇದನ್ನೂ ಓದಿ: ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು: ಸುಪ್ರೀಂಸೈಟ್ ವಾಪಸ್ ನೀಡಿ ತಪ್ಪು ಒಪ್ಪಿಕೊಂಡಿದ್ದಾರೆ ಅನ್ನೋ ಬಿಜೆಪಿ (BJP) ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ಹೇಗೆ ತಪ್ಪು ಒಪ್ಪಿದಂತಾಗುತ್ತದೆ? ನನ್ನ ಹೆಂಡತಿ ಮನನೊಂದು ಸೈಟ್ ವಾಪಸ್ ಮಾಡಿದ್ದಾರೆ. ಬಿಜೆಪಿಗರು ಸುಳ್ಳು ಹೇಳೋದರಲ್ಲಿ ನಿಸ್ಸೀಮರು. ರಾಜೀನಾಮೆ ಕೊಟ್ಟರೆ ಮುಗಿದು ಹೋಗುತ್ತಾ? ನಾನು ತಪ್ಪೇ ಮಾಡಿಲ್ಲವಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಅಣ್ಣನಿಗೆ ಆಗದೇ ಇರೋರು ಹಗರಣ ಮಾಡಿದ್ದಾರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು: ಸಿಎಂ ಸಹೋದರಯಡಿಯೂರಪ್ಪನವರದು (B S Yediyurappa) ನನ್ನದು ಬೇರೆ ಬೇರೆ ಪ್ರಕರಣ. ಅವರು ಡಿನೋಟಿಫಿಕೇಷನ್ ಮಾಡಿದ್ದಾರೆ. ನಾನೇನು ಮಾಡಿದ್ದೇನಾ? ನನ್ನ ಆದೇಶ ಪತ್ರ ವ್ಯವಹಾರ ಇತ್ತಾ? ಆ ಪ್ರಕರಣಕ್ಕೆ ಇದಕ್ಕೆ ಸಂಬಂಧ ಇಲ್ಲ. ನಾನು ಆತ್ಮಸಾಕ್ಷಿಯಾಗಿ ನಡೆದುಕೊಂಡಿದ್ದೇನೆ. ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR






 Advertisement 




Sign in to your account
Username or Email Address


Password

 Remember Me


