ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಇತ್ತೀಚಿಗಷ್ಟೇ ಗುಂಡಿಯನ್ನು ಮುಚ್ಚಬೇಕು ಎನ್ನುವ ಡೆಡ್‌ಲೈನ್ (DeadLine) ಮುಗಿದಿದ್ದು, ನಗರದ ಹೊರವಲಯದಲ್ಲಿರುವ ಚಿಕ್ಕಸಂದ್ರ (Chikkasandra) ಮುಖ್ಯ ರಸ್ತೆಯಿಂದ ಹೆಸರುಘಟ್ಟ (Hesaraghatta) ರಸ್ತೆಯ ಸಾಕಷ್ಟು ಮುಖ್ಯ ರಸ್ತೆಗಳ ಗುಂಡಿಗಳು ಮುಚ್ಚದೇ ಹಾಗೇ ಉಳಿದಿವೆ.ಡಿಸಿಎಂ ಡಿ.ಕೆ.ಶಿವಕುಮಾರ್‌ರವರು (DCM DKShivakumar) ಬೆಂಗಳೂರು ನಗರವನ್ನು ಬ್ರಾಂಡ್ ಬೆಂಗಳೂರು (Brand Bengaluru) ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ನಡುವೆ ಬಿಬಿಎಂಪಿ (BBMP) ಅಧಿಕಾರಿಗಳಿಗೆ ನಗರದ ಗುಂಡಿಗಳನ್ನು ಮುಚ್ಚಲು ಗಡುವು ನೀಡಿದ್ದರು. ಈಗಾಗಲೇ ಗಡುವು ಮುಗಿದು ಹಲವು ದಿನಗಳು ಕಳೆದಿವೆ. ಆದರೆ ಟಿ.ದಾಸರಹಳ್ಳಿ (T Dasarahalli) ವಿಧಾನಸಭಾ ಕ್ಷೇತ್ರದ ಚಿಕ್ಕಸಂದ್ರ ಮುಖ್ಯ ರಸ್ತೆಯಿಂದ ಹೆಸರುಘಟ್ಟ ರಸ್ತೆಯ ಸಾಕಷ್ಟು ಮುಖ್ಯ ರಸ್ತೆಗಳು ಗುಂಡಿ ಗಂಡಾಂತರಗಳಿಂದ ಕೂಡಿದ್ದು, ಅವ್ಯವಸ್ಥೆಯಾಗಿ ಉಳಿದಿದೆ.ಇದನ್ನೂ ಓದಿ: 2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?ಗಡುವು ನೀಡಿದ್ದರೂ ಈ ವಿಧಾನಸಭಾ ಕ್ಷೇತ್ರದಲ್ಲಿ ಜನರ ಪಾಡು ಕೇಳುವವರೇ ಇಲ್ಲದಂತಾಗಿದೆ. ಸಾಕಷ್ಟು ಬಾರಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಈ ಸಮಸ್ಯೆ ಹಾಗೆಯೇ ಉಳಿದಿದೆ. ಹೀಗಾಗಿ ರಸ್ತೆ ದುರಸ್ತಿಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.ಮಂಡಿಯುದ್ದದ ಗುಂಡಿಗಳು ವಾಹನ ಸವಾರರಲ್ಲಿ ಮೃತ್ಯು ಕೂಪವಾಗಿ ಪರಿಣಮಿಸಿವೆ. ಯಮಸ್ವರೂಪಿ ಗುಂಡಿ ಗಂಡಾಂತರದಿಂದ ಎದ್ದು ಬಿದ್ದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ತಮ್ಮ ಮಕ್ಕಳನ್ನು ಶಾಲೆಗೆ, ಶಾಲೆಯಿಂದ ಮನೆಗೆ ಕರೆತರಬೇಕಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇನ್ನೂ ಮಳೆಗಾಲದಲ್ಲಿ ಎಲ್ಲಿ ಗುಂಡಿ ಇದೆಯೋ, ಎಲ್ಲಿ ಮಳೆಯ ನೀರು ಇದೆಯೋ ಎಂಬುದು ತಿಳಿಯದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ತಮ್ಮ ಅಳಲನ್ನು ಆಕ್ರೋಶದ ರೀತಿಯಲ್ಲಿ ದುರಸ್ತಿ ಮಾಡಲು ಮನವಿ ಮಾಡಿದ್ದಾರೆ.ಒಟ್ಟಾರೆ ಬೃಹತ್ ಮಹಾನಗರ ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಗಳು ಈ ವರ್ಷದಲ್ಲಿ ದುರಸ್ತಿಯಾಗುತ್ತದೆಯಾ? ಎಂಬ ಅನುಮಾನವಿದ್ದು, ಬಿಬಿಎಂಪಿ ಅಧಿಕಾರಿಗಳು ಡಿಸಿಎಂ ಆದೇಶಕ್ಕೆ ದುರಸ್ತಿ ಮಾಡುತ್ತಾರಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌&Sign in to your account
Username or Email Address


Password

 Remember Me


