ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ.ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಮೃತಪಟ್ಟಿದ್ದಾರೆ.ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.Sign in to your account
Username or Email Address


Password

 Remember Me


