ಮೈಸೂರು: ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಅವ್ಯವಹಾರದ ವಿಚಾರ ನನ್ನ ಗಮನಕ್ಕೆ ಬಂದಿತ್ತು ಎಂದು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ (ST Somashekhar) ಬಾಂಬ್‌ ಸಿಡಿಸಿದ್ದಾರೆ.ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಉಸ್ತುವಾರಿ ಸಚಿವರಾಗಿದ್ದಾಗ ಈ ಅವ್ಯವಹಾರ ವಿಚಾರ ನನ್ನ ಗಮನಕ್ಕೆ ಬಂದಿತ್ತು. ಆಯುಕ್ತರು ಸಭೆ ಮಾಡದೆಯೇ ಸೈಟ್‌ಗಳನ್ನು ನೀಡಿದ್ದಾರೆ. 50:50 ಅನುಪಾತದಡಿ ನಿವೇಶನ ಕೊಡುವಾಗ ಸಭೆಯಲ್ಲಿ ಚರ್ಚೆಗೆ ತಂದು ಕೊಡಬೇಕು. ಆದ್ರೆ ಈ ನಿಯಮಗಳನ್ನು ಅಂದಿನ ಆಯುಕ್ತರು ಅನುಸರಿಸಿಲ್ಲ. ಹೀಗಾಗಿ ಅಂದಿನ ಆಯುಕ್ತರನ್ನ ಬದಲಾಯಿಸುವಂತೆ ಸರ್ಕಾರಕ್ಕೆ (Karnataka Govt) ಹೇಳಿದ್ದೆ. ಆದರೆ ಜಾತಿಯ ಪ್ರಭಾವದಿಂದ ಅವರು ಉಳಿದುಕೊಂಡರು. ಅವತ್ತಿನ ದಿನ ಸರಿಯಾದ ಕ್ರಮ ಆಗಿದ್ದರೇ ಇಂದು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿರಲಿಲ್ಲ, ಈಗಲಾದರೂ ಈ ಬಗ್ಗೆ ವ್ಯವಸ್ಥಿತವಾಗಿ ತನಿಖೆಯಾಗಲಿ ಎಂದು ಮನವಿ ಮಾಡಿದ್ದಾರೆ. ಇದನ್ನೂ  ಓದಿ: ಸಿಎಂ ಸರ್ಕಾರಕ್ಕೆ ಸೈಟ್ ವಾಪಸ್ ಕೊಡದಿದ್ದರೆ‌ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ: ಹೆಚ್. ವಿಶ್ವನಾಥ್ನನ್ನ ಹೆಸರಲ್ಲಿ ಸೈಟಿದ್ದರೆ ರಾಜೀನಾಮೆ: 
ಅನಗತ್ಯವಾಗಿ ಮುಡಾ ಹಗರಣ (MUDA Scam) ವಿಚಾರದಲ್ಲಿ ನನ್ನ ಹೆಸರು ತರಬೇಡಿ. ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಒಂದೇ ಒಂದು ನಿವೇಶನ ನನ್ನ ಹೆಸರಿನಲ್ಲಿ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಯಾವುದೇ ನಿವೇಶನ ತೆಗದುಕೊಂಡಿಲ್ಲ. ಯಾರಿಗೂ ನಾನು ಒತ್ತಡ ಹೇರಿ ನಿವೇಶನ ಕೊಡಿಸಿಲ್ಲ. ಈ ವಿಚಾರದಲ್ಲಿ ನನ್ನ ಹೆಸರು ತರಬೇಡಿ ಎಂದು ಹೇಳಿದ್ದಾರೆ. ಇದನ್ನೂ  ಓದಿ: ಮುಡಾ ಹಗರಣ – ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಫೋಟಕ ಮಾಹಿತಿ ಲಭ್ಯ!ಶಾಸಕರ ಫೈಲ್‌ಗಳೇ ಇರುತ್ತಿತ್ತು: 
ಮುಡಾದ ಪ್ರತಿ ಸಭೆಯಲ್ಲೂ ಸ್ಥಳೀಯ ಶಾಸಕರ ಫೈಲ್‌ಗಳೇ ಇರುತ್ತಿತ್ತು. ಶಾಸಕರ ಹೆಸರಿನ ಫೈಲ್‌ಗಳು ಚರ್ಚೆಯಾಗದೇ ಪಾಸ್‌ ಆಗುತ್ತಿತ್ತು. ಮುಡಾ ಸಭೆಯ ಬಹುತೇಕ ಫೈಲ್‌ಗಳು ಶಾಸಕರಿಗೇ ಸೇರಿದ್ದವು. ಅದಕ್ಕಾಗಿಯೇ ಮುಡಾ ಸದಸ್ಯರಾಗಲು ಬೇರೆ ಜಿಲ್ಲೆಯ ಪರಿಷತ್ ಸದಸ್ಯರು ವಾಸ ಸ್ಥಳವನ್ನ ಮೈಸೂರಿಗೆ ಕೊಡುತ್ತಿದ್ದರು. ಈ ಮಟ್ಟಕ್ಕೆ ಇಲ್ಲಿಯ ಶಾಸಕರಗಳು ಲಾಭಿ ಮಾಡುತ್ತಾರೆ. ಮುಡಾ ಇರುವುದು ಜನ ಸಾಮಾನ್ಯರ ಅಭಿವೃದ್ಧಿಗೋಸ್ಕರ. ಆದರೆ ಇಲ್ಲಿ ಆಗುತ್ತಿರುವುದು ಏನು? ಈ ಬೋರ್ಡ್ ವ್ಯವಸ್ಥೆ ಬದಲಾಗಬೇಕು ಎಂದು ಸೋಮಶೇಖರ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ  ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌Sign in to your account
Username or Email Address


Password

 Remember Me


