ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವತ್ಥ ನಾರಾಯಣ್ ಶಾಮೀಲು: ಸಿದ್ದು ಆರೋಪಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ ಹಾಕಿದ್ದಾನೆ. ಈ ವೇಳೆ ಕಾರಿನ ಚಾಲಕ ಪ್ರಕಾಶ್ ಕಾರನ್ನು ನಿಲ್ಲಿಸಿದ್ದಾನೆ. ಕಾರಿನಲ್ಲಿ ಪರಾರಿಯಾರಿದ್ದಾರೆ. ರಾಜನಂದಿನಿ ಅವರು ಇಲ್ವಾ, ಇತ್ತೀಚೆಗೆ ಅವರದ್ದು ಬಹಳ ಆಗಿದೆ. ಹೀಗೆ ಮುಂದುವರಿದರೆ ಅವರನ್ನು ಮುಗಿಸುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ. ಇದನ್ನೂ ಓದಿ: ‘ಆರ್‌ಎಸ್‌ಎಸ್’ ದೇಶದ ಶ್ರೀಮಂತ ಎನ್‍ಜಿಓ, ಅದಕ್ಕೆ ಹಣ ಎಲ್ಲಿಂದ ಬರುತ್ತೆ?: ಬಿ.ಕೆ ಹರಿಪ್ರಸಾದ್ಆದರೆ ಈ ವೇಳೆ ಕಾರಿನಲ್ಲಿ ರಾಜನಂದಿನಿ ಇರಲಿಲ್ಲ. ಅವರು ತಮ್ಮ ಕಾರು ಬಿಟ್ಟು ಬೇರೊಂದು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ ಆರೋಪಿ ಮಂಜು, ಚಾಲಕ ಪ್ರಕಾಶ್ ನ ಸಮ್ಮುಖದಲ್ಲಿ ಬೆದರಿಕೆ ಹಾಕಿದ್ದಾನೆ. ನಿಮ್ಮ ಮೇಡಂಗೆ ಈ ಬಗ್ಗೆ ಹೋಗಿ ಹೇಳು ಎಂದಿದ್ದಾನೆ. ಘಟನೆ ಸಂಬಂಧ ಚಾಲಕ ಪ್ರಕಾಶ್ ಆರು ಜನರ ವಿರುದ್ಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


