ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 148 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 142 ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ಶೇ.90 ರಷ್ಟು ಕೇಸ್ ನಗರದಲ್ಲೇ ದಾಖಲಾಗಿದೆ. ಈ ಮೂಲಕ ಪಾಸಿಟಿವಿಟಿ ರೇಟ್ ಶೇ. 1.84 ದಾಖಲಾಗಿದೆ.ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,801ಕ್ಕೆ ತಲುಪಿದೆ. ಇಂದು ಕೂಡ ಶೂನ್ಯ ಮರಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,060 ಮರಣ ಪ್ರಕರಣ ಪತ್ತೆಯಾಗಿದ್ದು, ಕಳೆದ ಕೆಲ ತಿಂಗಳಿಂದ ಮರಣ ಪ್ರಕರಣ ಸ್ಥಿರತೆ ಕಾಯ್ದುಕೊಂಡಿದೆ. ಇಂದು 162 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನ‌ಈವರೆಗೆ ರಾಜ್ಯದಲ್ಲಿ ಒಟ್ಟು 39,48,092 ಮಂದಿಗೆ ಕೊರೊನಾ ಬಂದಿದ್ದು, ಬೆಂಗಳೂರಿನಲ್ಲಿ ಈವರೆಗೆ 17,84,022 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,06,189 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 69,911 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 8,037 ಸ್ಯಾಂಪಲ್ (ಆರ್‌ಟಿಪಿಸಿಆರ್ 5,896 + 2,141 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಗೆ ಆಗಸ್ಟ್ 15ರೊಳಗೆ ಶಂಕುಸ್ಥಾಪನೆ: ಬೊಮ್ಮಾಯಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 142, ಮೈಸೂರು 3, ಬಳ್ಳಾರಿ, ಕೋಲಾರ ಮತ್ತು ಮಂಡ್ಯದಲ್ಲಿ ತಲಾ ಒಂದೊಂದು ಸೇರಿ ಒಟ್ಟು 148 ಪ್ರಕರಣ ವರದಿಯಾಗಿದೆ.






 Advertisement 




Sign in to your account
Username or Email Address


Password

 Remember Me


