ಸೂಪರ್ ಸ್ಟಾರ್ ರಜನಿಕಾಂತ್ ಅವರ ಹೊಸ ಸಿನಿಮಾದಲ್ಲಿ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿದೆ. ಸಾಮಾನ್ಯವಾಗಿ ಶಿವರಾಜ್ ಕುಮಾರ್ ಪರಭಾಷಾ ಚಿತ್ರಗಳಲ್ಲಿ ನಟಿಸುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ಆದರೆ, ರಜನಿ ಮೇಲಿರುವ ಗೌರವದಿಂದಾಗಿ ಈ ಚಿತ್ರವನ್ನು ಒಪ್ಪಬಹುದು ಎನ್ನುತ್ತಾರೆ ಅವರು ಆಪ್ತರು. ಇದನ್ನೂ ಓದಿ : ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆಈ ಹಿಂದೆ ಬಾಲಕೃಷ್ಣ ನಟನೆಯ ‘ಗೌತಮಪುತ್ರ ಶಾತಕರ್ಣಿ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದರು. ಅದನ್ನು ಬಿಟ್ಟರೆ, ಪರಭಾಷಾ ಸಿನಿಮಾಗಳಲ್ಲಿ ನಟಿಸುವಂತೆ ಅವಕಾಶ ಬಂದರೂ, ನಿರಾಕರಿಸಿದ್ದಾರೆ. ಹಾಗಾಗಿ ಸೂಪರ್ ಸ್ಟಾರ್ ನಟನೆಯ 169ನೇ ಚಿತ್ರದಲ್ಲಿ ಶಿವರಾಜ್ ಕುಮಾರ್ ಇರಲಿದ್ದಾರಾ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು. ಇದನ್ನೂ ಓದಿ : ಹಿರಿಯ ರಂಗಕರ್ಮಿ, ಏಣಗಿ ಬಾಳಪ್ಪನವರ ಪತ್ನಿ ಲಕ್ಷ್ಮೀಬಾಯಿ ನಿಧನಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಸದ್ಯದಲ್ಲೇ ಶಿವಣ್ಣನ ಮನೆಗೆ ನೆಲ್ಸನ್ ದಿಲೀಪ್ ಕುಮಾರ್ ಭೇಟಿ ನೀಡಿ, ಕಥೆ ಮತ್ತು ಪಾತ್ರದ ವಿವರಣೆಯನ್ನೂ ಕೊಡಲಿದ್ದಾರೆ ಎನ್ನುವ ಮಾಹಿತಿ ಕೂಡ ಹರಿದಾಡುತ್ತಿದೆ. ಅದೊಂದು ಪವರ್ ಫುಲ್ ಪಾತ್ರವಾಗಿದ್ದು, ಆ ಪಾತ್ರವನ್ನು ಒಪ್ತಾರೆ ಎನ್ನುವ ವಿಶ್ವಾಸ ನಿರ್ದೇಶಕರದ್ದು. ಇದನ್ನೂ ಓದಿ : ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲಆದರೆ, ಅಧಿಕೃತವಾಗಿ ಈ ಕುರಿತು ಎಲ್ಲಿಯೂ ಹೇಳಿಕೊಂಡಿಲ್ಲವಾದರೂ, ಶಿವರಾಜ್ ಕುಮಾರ್ ಅಥವಾ ರಜನಿಕಾಂತ್ ಅಭಿಮಾನಿಗಳು ಈ ಕುರಿತು ಕೆಲ ಮಾಹಿತಿಗಳನ್ನು ಲೀಕ್ ಮಾಡಿದ್ದಾರೆ. ಅಲ್ಲದೇ, ನೆಲ್ಸನ್ ಕೂಡ ಅತೀ ಶೀಘ್ರದಲ್ಲೇ ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಲಿದ್ದಾರೆ.Sign in to your account
Username or Email Address


Password

 Remember Me


