ಹಾವೇರಿ: ಬಸವ ಜಯಂತಿ ಪ್ರಯುಕ್ತ ನಡೆದ ಎತ್ತುಗಳ ಮೆರವಣಿಗೆ ವೇಳೆ ಸವಣೂರು ತಾಲೂಕಿನ ಗ್ರಾಮದಲ್ಲಿ ಯುವಕನೊಬ್ಬ ಚಪ್ಪಲಿ ತೂರಿ ವಿಕೃತಿ ಮೆರೆದಿದ್ದಾನೆ.ಮಂಗಳವಾರ ರಾತ್ರಿ ಕಾರಡಗಿ ಗ್ರಾಮದಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಎತ್ತುಗಳ ಮೇಲೆ ಖಾಜಾಮುದ್ದೀನ್ ಕೋಲ್ಕಾರ(29) ಎಂಬಾತ ಚಪ್ಪಲಿ ತೂರಿದ್ದಾನೆ.ಚಪ್ಪಲಿ ತೂರಿದ್ದಕ್ಕೆ ಆಕ್ರೋಶಗೊಂಡ ಜನರು ಯುವಕನನ್ನು ಹಿಡಿದು ಕಟ್ಟಿ ಹಾಕಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಖಾಜಾಮುದ್ಧೀನ್‌ನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮೇ 6ರಂದು ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ ಸನ್ಯಾಸ ದೀಕ್ಷೆ ಸ್ವೀಕಾರಥಳಿತಕ್ಕೆ ಒಳಗಾದ ಆರೋಪಿ ತಲೆಗೆ ಗಾಯವಾದ ಹಿನ್ನೆಲೆಯಲ್ಲಿ ಈಗ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


