ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿಯ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡಿದೆ ಸಂತ್ರಸ್ತೆಯ ತೊಡೆಯ ಭಾಗಕ್ಕೆ ಸರ್ಜರಿ ಮಾಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆ ಯುವತಿ ಮೇಲೆ ನಾಗೇಶ್ ಎಂಬಾತ ಆ್ಯಸಿಡ್ ದಾಳಿ ನಡೆಸುವ ಮೂಲಕ ವಿಕೃತ ಮೆರೆದಿದ್ದ. ಇದರಿಂದ ಶೇ.40 ರಿಂದ ಶೇ.50 ರಷ್ಟು ಸುಟ್ಟುಹೋಗಿದ್ದ ಯುವತಿ ಸ್ಥಿತಿ ಗಂಭೀರವಾಗಿತ್ತು. ಸದ್ಯ ಸೆಂಟ್ ಜಾನ್ ಆಸ್ಪತ್ರೆಯ ವೈದ್ಯರು ಯುವತಿಯ ಎರಡು ತೊಡೆ ಭಾಗದಲ್ಲಿ ಇನ್ಫೆಕ್ಷನ್ ಆಗದ ರೀತಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ, ಆ್ಯಸಿಡ್‍ನಿಂದ ಸುಟ್ಟಿದ ಡೆಡ್ ಸ್ಕಿನ್‍ನನ್ನು ತೆಗೆದಿದ್ದಾರೆ. ಇದನ್ನೂ ಓದಿ: 5 ದಿನವಾದ್ರೂ ಸಿಗದ ಆ್ಯಸಿಡ್ ನಾಗನ ಸುಳಿವು- ಪಾಗಲ್ ಪ್ರೇಮಿಯ ಪ್ರೀಪ್ಲ್ಯಾನ್ ಕೇಳಿ ಪೊಲೀಸ್ರೇ ಶಾಕ್ಶಸ್ತ್ರಚಿಕಿತ್ಸೆ ಬಳಿಕ ಪ್ರಜ್ಞಾಹೀನಳಾಗಿದ್ದ ಯುವತಿಗೆ ಮಧ್ಯರಾತ್ರಿ ವೇಳೆಗೆ ಪ್ರಜ್ಞೆ ಬಂದಿದ್ದು, ಯುವತಿ ಪೋಷಕರ ಜೊತೆ ಮಾತನಾಡುತ್ತಿದ್ದಾಳೆ. ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆ ಐಸಿಯುನಲ್ಲಿ ಯುವತಿಗೆ ಚಿಕಿತ್ಸೆ ಮುಂದುವರೆದಿದೆ. ಮತ್ತೊಂದೆಡೆ ಆ್ಯಸಿಡ್ ದಾಳಿಕೋರ ನಾಗೇಶ್‍ಗಾಗಿ ಕಾಮಾಕ್ಷಿಪಾಳ್ಯ  ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ಆ್ಯಸಿಡ್ ಅಟ್ಯಾಕ್!  Sign in to your account
Username or Email Address


Password

 Remember Me


