ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 111 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ಕಳೆದ 24 ಗಂಟೆಗಳಲ್ಲಿ ಪಾಸಿಟಿವಿಟಿ ರೇಟ್ ಶೇ.1.78ಕ್ಕೆ ಏರಿಕೆ ಕಂಡಿದೆ.ವಾರದ ಪಾಸಿಟಿವಿಟಿ ರೇಟ್ ಗಮನಿಸಿದಾಗ ಶೇ.1.28 ಕಂಡುಬಂದರೆ, ದಿನದ ಪಾಸಿಟಿವಿಟಿ ರೇಟ್ ಏರಿಕೆ ಕಾಣುತ್ತಿದೆ. ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ನೂರಕ್ಕೂ ಅಧಿಕ ಪಾಸಿಟಿವ್ ಕೇಸ್‍ಗಳು ಪತ್ತೆಯಾಗುತ್ತಿದೆ. ಈ ಮೂಲಕ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,815ಕ್ಕೆ ಏರಿಕೆ ಕಂಡಿದೆ. ಇಂದು ಕೂಡ ಶೂನ್ಯ ಮರಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,060 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 76 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಯಾಣ ಮಿತ್ರ ಸಹಾಯವಾಣಿ ಪ್ರಾರಂಭಈವರೆಗೆ ರಾಜ್ಯದಲ್ಲಿ ಒಟ್ಟು 39,47,837 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,920 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 43,685 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 6,224 ಸ್ಯಾಂಪಲ್ (ಆರ್​ಟಿಪಿಸಿಆರ್ 5,457 + 767 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಏಪ್ರಿಲ್‍ನಲ್ಲಿ 7.83% ಕ್ಕೆ ಏರಿದೆ ಭಾರತದ ನಿರುದ್ಯೋಗ ದರಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 103, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ 2, ಬೆಳಗಾವಿ, ಹಾವೇರಿ, ರಾಮನಗರ, ಉತ್ತರಕನ್ನಡದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಉಳಿದ 27 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.






 Advertisement 




Sign in to your account
Username or Email Address


Password

 Remember Me


