ಬಳ್ಳಾರಿ: ಹಳೆ ದ್ವೇಷದ ಹಿನ್ನೆಲೆ ರೌಡಿ ಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೊಲೆಯಾದ ರೌಡಿ ಶೀಟರ್ ಮಹೇಂದ್ರ(34), ಈ ಹಿಂದೆ ತಾಂಡಾ ರಮೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಇದಕ್ಕೂ ಮೊದಲು 3 ಬಾರಿ ಮಹೇಂದ್ರನ ಕೊಲೆಗೆ ಯತ್ನ ನಡೆದಿತ್ತು ಎಂದು ಬಳ್ಳಾರಿ ಎಸ್‌ಪಿ ಸೈದುಲ್ಲಾ ಅಡವಾತ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾರಿನಲ್ಲಿದ್ದ ಮೊಬೈಲ್ ಕದ್ದ – ಕರೆ ಮಾಡಿದ್ರೆ ಹಣಕ್ಕಾಗಿ ಬ್ಲಾಕ್‌ಮೇಲ್ಭಾನುವಾರ ರಾತ್ರಿ ಮಹೇಂದ್ರನ ಹತ್ಯೆಗೈದ ಆರೋಪದಡಿ ಕೇಶವ, ಬಾಬು, ನವೀನ್, ವಂಶಿ, ಶಂಕರ್, ಧನಂಜಯ್, ರವಿ, ಸೂರಿ, ಪ್ರಕಾಶ್ ಹಾಗೂ ನವೀನ್‌ನನ್ನು ಬಂಧಿಸಲಾಗಿದೆ. ಬಂಧಿತರಿಂದ ಮಚ್ಚು, ಕತ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಡವಾತ್ ಹೇಳಿದ್ದಾರೆ.ಮಹೇಂದ್ರ ಕಳೆದ ರಾತ್ರಿ ಮನೆಗೆ ತೆರಳುವ ವೇಳೆ ನಗರದ ಹಾವಂಭಾವಿ ಪ್ರದೇಶದಲ್ಲಿ 10 ಕ್ಕೂ ಹೆಚ್ಚು ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಬಳಿಕ ಆತನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಆಸ್ತಿಗಾಗಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


