ಡ್ರಗ್ಸ್ ಕೇಸ್ ನಂತರ ಸಾಕಷ್ಟು ಬದಲಾವಣೆ ಆಗಿರುವ ರಾಗಿಣಿ ದ್ವಿವೇದಿ, ಇದೀಗ ಮತ್ತೆ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರ ಕೈಯಲ್ಲಿ ಎರಡು ಚಿತ್ರಗಳಿದ್ದು, ಎರಡೂ ಸಿನಿಮಾಗಳಲ್ಲೂ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಒಂದು ತಮಿಳು ಚಿತ್ರವಾದರೆ ಮತ್ತೊಂದು ಕನ್ನಡ ಮತ್ತು ತಮಿಳಿನಲ್ಲಿ ಮೂಡಿ ಬರುತ್ತಿವೆ. ಇದನ್ನೂ ಓದಿ : ರವಿವರ್ಮನ ಕಲ್ಪನೆಯ ಸುಂದರಿಯರಂತೆ ಪತ್ನಿಯ ಫೋಟೋ ಶೂಟ್ ಮಾಡಿಸಿದ ಜನಾರ್ದನ ರೆಡ್ಡಿಕಳೆದ ಸಂಕ್ರಾಂತಿಯ ದಿನದಂದು ತಮಿಳಿನ ‘ಒನ್ 2 ಒನ್’ ಚಿತ್ರಕ್ಕೆ ಮುಹೂರ್ತವಾಗಿದ್ದು, ಕೆಲ ಹಂತದ ಶೂಟಿಂಗ್ ನಲ್ಲೂ ರಾಗಿಣಿ ಪಾಲ್ಗೊಂಡಿದ್ದಾರೆ. ತಿರುಜ್ಞಾನಮ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಇದೊಂದು ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಸಿನಿಮಾವಾಗಿದೆ. ಹೋಮ್ಲಿ ರೀತಿಯ ಪಾತ್ರವನ್ನು ಈ ಸಿನಿಮಾದಲ್ಲಿ ನಿರ್ವಹಿಸುತ್ತಿದ್ದಾರಂತೆ ರಾಗಿಣಿ. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿಮೊನ್ನೆಯಷ್ಟೇ ಅವರು ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದು, ಅದು ತಮಿಳು ಮತ್ತು ಕನ್ನಡದಲ್ಲಿ ನಿರ್ಮಾಣವಾಗುತ್ತಿದೆ. ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಕನ್ನಡದ ನಿರ್ದೇಶಕರೇ ಆದ ಪ್ರಶಾಂತ್ ರಾಜ್ ಈ ಚಿತ್ರದ ನಿರ್ದೇಶಕರು. ಈಗಾಗಲೇ ಬೆಂಗಳೂರಿನಲ್ಲೇ ಚಿತ್ರದ ಶೂಟಿಂಗ್ ನಡೆದಿದೆ. ತಾನ್ಯ ಹೋಪ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ರಾಗಿಣಿ ಅವರದ್ದು ಅತಿಥಿ ಪಾತ್ರವಾ? ಅಥವಾ ಮತ್ತೊಂದು ನಾಯಕಿಯ ಪಾತ್ರವಾ ಗೊತ್ತಾಗಿಲ್ಲ. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿಪ್ರಶಾಂತ್ ರಾಜ್ ನಿರ್ದೇಶನದ ಚಿತ್ರಕ್ಕೆ ಸಂತಾನಂ ಹೀರೋ. ಮೊದಲ ಬಾರಿಗೆ ಅವರು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡ ಮತ್ತು ತಮಿಳು ಎರಡೂ ಭಾಷೆಗಳಲ್ಲೂ ಈ ಸಿನಿಮಾದ ಮೂಡಿ ಬರುತ್ತಿರುವುದು ವಿಶೇಷ. ಈ ಸಿನಿಮಾದಲ್ಲಿ ರಾಗಿಣಿ ಗ್ಲಾಮರ್ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು, ನಂತರ ಚೆನ್ನೈನಲ್ಲಿ ಚಿತ್ರೀಕರಣವಂತೆ.Sign in to your account
Username or Email Address


Password

 Remember Me


