ಬೆಳಗಾವಿ: ಎಂಇಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ಮುಖಂಡ ಶುಭಂ ಶೆಳಕೆ ಸಂಯುಕ್ತ ಮಹಾರಾಷ್ಟ್ರ ಪರಿಕಲ್ಪನೆಯ ನಕ್ಷೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಗಡಿ ವಿವಾದವನ್ನು ಕೆಣಕಿದ್ದಾರೆ.ನಾಡದ್ರೋಹಿಗಳ ಮೇಲಿನ ದೇಶದ್ರೋಹ ಕೇಸ್ ಕೈ ಬಿಟ್ಟ ಬೆನ್ನಲ್ಲೇ ಶುಭಂ ಶೆಳಕೆ ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ ಗ್ರಾಫಿಕ್ ನಕ್ಷೆಯನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಭಾಷಾ ಸಾಮರಸ್ಯ ಕದಡುವ ಹುನ್ನಾರ ನಡೆಸಿದ್ದಾರೆ. ಇದನ್ನೂ ಓದಿ: ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆಗಳನ್ನು ಕಲಿಸಬೇಕು: ಧನ್ ಸಿಂಗ್ ರಾವತ್ವಿಡಿಯೋ ಜೊತೆಗೆ ಮಹಾರಾಷ್ಟ್ರವಾದಿಗಳೇ ನಮಗೆ ಮನಃಪೂರ್ವಕವಾಗಿ ಮಹಾರಾಷ್ಟ್ರ ದಿನಕ್ಕೆ ಶುಭಕೋರಲು ಆಗುತ್ತಿಲ್ಲ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ವೀಡಿಯೋ ಜೊತೆ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧುSign in to your account
Username or Email Address


Password

 Remember Me


