ಮಂಡ್ಯ: ನಾನು ಹಾಗೂ ಸಚಿವ ಗೋಪಾಲಯ್ಯ ಒಂದೇ ಪಕ್ಷದಲ್ಲಿ ಇದ್ದೆವು. ನಮಗೆ ಕೊಟ್ಟ ಕಾಟ ಭಗವಂತನಿಗೆ ಮಾತ್ರ ಗೊತ್ತು. ಇದರಿಂದ ನಾವು, ಅವರು ಬಿಜೆಪಿ ಸೇರಿ ಸುಖವಾಗಿದ್ದೇವೆ ಎಂದು ಜೆಡಿಎಸ್ ವಿರುದ್ಧ ಸಚಿವ ನಾರಾಯಣ್ ಗೌಡ ಗುಡುಗಿದ್ದಾರೆ.ಮದ್ದೂರು ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಸೇವೆ ಮಾಡುವ ಶಕ್ತಿಯನ್ನ ಪಕ್ಷ ನೀಡಿದೆ. ಬಿಜೆಪಿ ಸೇರಿದ ಬಳಿಕ ನಮ್ಮನ್ನ ಸಚಿವರನ್ನಾಗಿ ಬಿಜೆಪಿ ಮಾಡಿದೆ. ಈ ಮೂಲಕ ರಾಜ್ಯವನ್ನ ಸುತ್ತಾಡಿ ಜನರ ಸೇವೆ ಮಾಡಲು ಅವಕಾಶ ನೀಡಿದೆ. ಅದೇ ರೀತಿ ಕೆ.ಆರ್.ಪೇಟೆ ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿ ಅನುದಾನವನ್ನ ಕೊಟ್ಟಿದೆ ಎಂದರು. ಇದನ್ನೂ ಓದಿ: ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್‍.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್ಅದೇ ರೀತಿ ಮುಂದಿನ ಚುನಾವಣೆಯಲ್ಲಿ ಮದ್ದೂರಿನಲ್ಲಿ ಎಸ್.ಪಿ.ಸ್ವಾಮಿಯವರಿಗೆ ನೀವು ಅಶಿರ್ವಾದ ಮಾಡಿ. ಅವರು ಜೆ.ಡಿ.ಎಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ಅವರ ಗಂಡಸ್ತನಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ನಾಲ್ಕೈದು ಸ್ಥಾನವನ್ನ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ನಾರಾಯಣಗೌಡ, ಗೋಪಾಲಯ್ಯ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾಗಿಯಾಗಿದ್ದರು. ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಪಕ್ಷದ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು. ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ ಕಾರ್ಯಕ್ರಮ ಕೂಡ ಇತ್ತು. ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು.Sign in to your account
Username or Email Address


Password

 Remember Me


