ಬೆಂಗಳೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಮೇ 3ರ ಮಂಗಳವಾರದಂದು ಅಧಿಕೃತವಾಗಿ ಕೇಂದ್ರ ಸಚಿವ ಅಮಿತ್ ಶಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು.ಮೇ 3ರ ಕಾರ್ಯಕ್ರಮಕ್ಕೆ ನಡೆದಿರುವ ಸಿದ್ಧತೆಗಳನ್ನು ಭಾನುವಾರ ಪರಿಶೀಲಿಸಿದ ಸಚಿವ, ನೃಪತುಂಗ ವಿ.ವಿ. ಉದ್ಘಾಟನೆ ಕಾರ್ಯಕ್ರಮವನ್ನು ಚಾರಿತ್ರಿಕ ಸಮಾರಂಭವನ್ನಾಗಿ ಮಾಡಿ, ಸ್ಮರಣೀಯಗೊಳಿಸಲಾಗುವುದು. ಸರ್ಕಾರಿ ಕಲಾ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ಸಾವಿರ ಜನ ಭಾಗವಹಿಸಲಿದ್ದಾರೆ ಎಂದರು. ಇದನ್ನೂ ಓದಿ: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿ ವಿಳಂಬ – ಸ್ಯಾಂಕಿ ಬಳಿ ಪ್ರತಿಭಟನೆಮೈಸೂರಿನ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ 100 ವರ್ಷಗಳ ಹಿಂದೆ(1921ರಲ್ಲಿ) ಸ್ಥಾಪಿಸಿದ ಈ ಸಂಸ್ಥೆ ಹಂತಹಂತವಾಗಿ ಬೆಳೆದು ಬಂದಿದೆ. ಈಗ ಪೂರ್ಣ ವಿಶ್ವವಿದ್ಯಾಲಯದ ರೂಪವನ್ನು ಪಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಶೈಕ್ಷಣಿಕ ಕ್ರಾಂತಿ ಮಾಡಲು ಸಂಕಲ್ಪ ಮಾಡಿರುವುದರ ಫಲವಿದು ಎಂದು ಹೇಳಿದರು.ನೃಪತುಂಗ ವಿ.ವಿ.ಯಲ್ಲಿ ಬಿ.ಎಸ್ಸಿ ಮತ್ತು ಬಿಸಿಎ ಪದವಿಗಳಡಿ 24 ಕೋರ್ಸುಗಳು, 7 ಸ್ನಾತಕೋತ್ತರ ಶಿಸ್ತುಗಳು ಮತ್ತು 3 ಸಂಶೋಧನಾ ಕೇಂದ್ರಗಳು ಇರಲಿವೆ. ಈ ವಿ.ವಿ.ಗೆ ಕೇಂದ್ರ ಸರ್ಕಾರ 55 ಕೋಟಿ ರೂ.ಗಳಷ್ಟು ಅನುದಾನವನ್ನು ಮಂಜೂರು ಮಾಡಿದೆ. ಈ ಮೂಲಕ ನೃಪತುಂಗ ವಿ.ವಿ.ಯನ್ನು ಜಾಗತಿಕ ಗುಣಮಟ್ಟದ ಸಂಸ್ಥೆಯಾಗಿ ರೂಪಿಸಲಾಗುವುದು ಎಂದು ಸಚಿವರು ವಿವರಿಸಿದರು. ಇದನ್ನೂ ಓದಿ: ಆ್ಯಸಿಡ್ ದಾಳಿ ಮಾಡಿದವರಿಗೆ ಮರಣ ದಂಡನೆ ನೀಡಿ: ಬಾಲಕಿ ಆಕ್ರೋಶಭಾರತವನ್ನು ಜ್ಞಾನದ ರಾಜಧಾನಿಯನ್ನಾಗಿ ಮಾಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ. ಇದರಲ್ಲಿ ಪಠ್ಯದ ಕಲಿಕೆಯ ಜೊತೆಗೆ ಕೌಶಲ್ಯಾಭಿವೃದ್ಧಿಗೂ ಆದ್ಯ ಗಮನ ಕೊಡಲಾಗಿದೆ. ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ನೃಪತುಂಗ ವಿ.ವಿ. ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡು, ಮುಂದಡಿ ಇಡಲಿದೆ ಎಂದು ತಿಳಿಸಿದರು.Sign in to your account
Username or Email Address


Password

 Remember Me


