ಧಾರವಾಡ: ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದಂತೆ ಭೂಮಿ ಕಳೆದುಕೊಂಡ ಸಂತ್ರಸ್ತ ಮಹಿಳೆಯೊಬ್ಬರು ತನಗೆ ಪರಿಹಾರ ನೀಡುವಂತೆ ಕೆಐಎಡಿಬಿ ಅಧಿಕಾರಿಗೆ ಕಾಲಿಗೆ ಬಿದ್ದು ಕಣ್ಣೀರು ಹಾಕಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ.ಇಟಿಗಟ್ಟಿ ಗ್ರಾಮದ ಅಕ್ಕವ್ವ ಲಕ್ಕಪ್ಪನವರ ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದಂತೆ ಭೂಮಿ ಕಳೆದುಕೊಂಡು ಅಸಹಾಯಕಳಾಗಿ ಅಧಿಕಾರಿ ಕಾಲಿಗೆ ಬಿದ್ದಿದ್ದಾರೆ. ಗಾಮನಗಟ್ಟಿ ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಕವ್ವ ಅವರಿಗೆ ಸೇರಿದ ಒಂದು ಎಕರೆ ಜಮೀನನ್ನು ಕೆಐಎಡಿಬಿ ಸ್ವಾಧೀನ ಪಡಿಸಿಕೊಂಡಿತ್ತು. ಇದರಲ್ಲಿ ಅಕ್ಕವ್ವಳಿಗೆ 55 ಲಕ್ಷ ಪರಿಹಾರ ಬರಬೇಕಿದೆ. ಆದರೆ, ಈ ಹಣ ಅಧಿಕಾರಿಗಳ ಅಚಾತುರ್ಯದಿಂದ ಆಕೆಯ ಕೈ ಸೇರಿಲ್ಲ. ಇದರಿಂದ ದಿಕ್ಕು ತೋಚದ ಅಕ್ಕವ್ವ ಕೆಐಎಡಿಬಿ ಕಚೇರಿಗೆ ಬಂದು ಅಧಿಕಾರಿ ಕಾಲಿಗೆ ಬಿದ್ದು ತನಗೆ ಬರಬೇಕಾದ ಪರಿಹಾರವನ್ನು ನೀಡುವಂತೆ ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿ ಸಂತ್ರಸ್ತೆಯಿಂದ ಡೈಯಿಂಗ್ ಡಿಕ್ಲರೇಶನ್ ಪಡೆದ ಪೊಲೀಸರುಅಕ್ಕವ್ವಳಿಗೆ ಸೇರಬೇಕಾದ ಪರಿಹಾರ ಮೊತ್ತವನ್ನು ಕೆಐಎಡಿಬಿ ಅಧಿಕಾರಿಗಳು ಆಕೆಯ ಸಹೋದರನ ಅಕೌಂಟ್‍ಗೆ ನೆಫ್ಟ್ ಮಾಡಿದ್ದಾರೆ. ದಾಖಲೆಗಳಲ್ಲಿ ಅಕ್ಕವ್ವ ಅವರ ಸಹಿ ಇದೆ. ಆದರೆ, ಆಕೆ ಕಚೇರಿಗೆ ಬರದೇ ಇದ್ದರೂ ನಕಲಿ ಸಹಿ ಸೃಷ್ಟಿಸಿ ಆಕೆಯ ಸಹೋದರನ ಅಕೌಂಟ್‍ಗೆ ಹಣ ವರ್ಗಾವಣೆ ಮಾಡಿದ್ದಾರೆ. ಇದೇ ವಿಷಯವನ್ನು ಕೇಳಲು ಬಂದ ಅಕ್ಕವ್ವಳಿಗೆ ಅಧಿಕಾರಿಗಳು ಉಡಾಫೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಮನೆಯಿಂದ ಹೋಗಬೇಕಾದ್ರೆ ರಾಜಕುಮಾರಿ ತರ ಹೋದ್ಳು, ಆದರೆ ಈಗ….: ಆ್ಯಸಿಡ್ ಸಂತ್ರಸ್ತೆ ತಾಯಿ ಅಳಲುಅಕ್ಕವ್ವರ ಸಹೋದರನ ಬ್ಯಾಂಕ್ ಖಾತೆಗೆ ಅಧಿಕಾರಿಗಳು ಒಟ್ಟು 4 ಕೋಟಿ 8 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಅಕ್ಕವ್ವ ಅವರಿಗೆ 55 ಲಕ್ಷ ಪರಿಹಾರ ಬರಬೇಕಿದೆ. ಅಕ್ಕವ್ವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡದ ಅಧಿಕಾರಿಗಳು ಆಕೆಯ ಸಹೋದರನ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದ್ದನ್ನು ನೋಡಿದರೆ ಇದರಲ್ಲಿ ಗೋಲ್‍ಮಾಲ್ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.






 Advertisement 




Sign in to your account
Username or Email Address


Password

 Remember Me


