ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆಗಳಲ್ಲಿ ಏರಿಳಿತ ಕಾಣುತ್ತಿದೆ. ಇಂದು ಒಟ್ಟು 133 ಪಾಸಿಟಿವ್ ಕೇಸ್ ದಾಖಲಾಗಿದೆ ಈ ಮೂಲಕ ನಿನ್ನೆಗಿಂತ ಇಂದು 21 ಕಡಿಮೆ ಕೇಸ್ ವರದಿಯಾಗಿದ್ದು, ನಿನ್ನೆ 154 ಪಾಸಿಟಿವ್ ಕೇಸ್ ಪತ್ತೆಯಾಗಿತ್ತು.ಇಂದು ಬೆಂಗಳೂರೊಂದರಲ್ಲೇ 127 ಕೇಸ್ ದಾಖಲಾಗಿವೆ. ಈ ಮೂಲಕ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,737ಕ್ಕೆ ತಲುಪಿದೆ. ಆದರೆ ಮರಣ ಪ್ರಕರಣ ಮಾತ್ರ ಸ್ಥಿರವಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ಒಟ್ಟು 147 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಾಲ್ಕನೇ ಅಲೆ ನಡುವೆ ರಾಜ್ಯದಲ್ಲಿ ಟೆಸ್ಟಿಂಗ್ ಮತ್ತು ಲಸಿಕೆ ಪಡೆದವರ ಸಂಖ್ಯೆ ಏರಿಕೆ ಕಾಣುತ್ತಿದೆ. ಇದನ್ನೂ ಓದಿ: 12-17 ವರ್ಷದೊಳಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆಗೆ ಅನುಮೋದನೆಈವರೆಗೆ ರಾಜ್ಯದಲ್ಲಿ ಒಟ್ಟು 39,47,496 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,660 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 74,982 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 11,415 ಸ್ಯಾಂಪಲ್ (ಆರ್‌ಟಿಪಿಸಿಆರ್ 8,826 + 2,589 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹಳ್ಳಿಹಳ್ಳಿಯಲ್ಲೂ ಆರೋಗ್ಯ ಸೇವೆ ಸುಲಭವಾಗಿ ಸಿಕ್ಕಾಗ ಮಾತ್ರ ದೇಶ ಅಭಿವೃದ್ಧಿಯಾಗುತ್ತೆ: ಸುಧಾಕರ್ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 127, ದಕ್ಷಿಣ ಕನ್ನಡ 2, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ ಮತ್ತು ಹಾಸನದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.






 Advertisement 




Sign in to your account
Username or Email Address


Password

 Remember Me


