ಸ್ಯಾಂಡಲ್‌ವುಡ್‌ನಲ್ಲಿ ಡೆಡ್ಲಿ, ವಿಲನ್, ಎದೆಗಾರಿಕೆ ಸಿನಿಮಾಗಳ ಮೂಲಕ ಗಮನ ಸೆಳೆದ ನಟ ಆದಿತ್ಯ ಈಗ ಗ್ಯಾಂಗ್‌ಸ್ಟರ್ ಆಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಈ ಹೊಸ ಸಿನಿಮಾಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದಾರೆ.ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಚಿತ್ರ ನಿರ್ದೇಶನ ಮಾಡುವುದರ ಮೂಲಕ ಸೈ ಎನಿಸಿಕೊಂಡಿರೋ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರ ಆದಿತ್ಯಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ವಿಭಿನ್ನ ಪಾತ್ರಗಳ ಮೂಲಕ ಮೋಡಿ ಮಾಡಿರೋ ಆದಿತ್ಯ ಕರಾವಳಿ ಭಾಗದ ಜನಪ್ರಿಯ ಕಂಬಳದ ಕಥೆ ಹೇಳಲು ಹೊರಟಿದ್ದಾರೆ.ರಾಜೇಂದ್ರ ಸಿಂಗ್ ಬಾಬು ಮತ್ತು ಆದಿತ್ಯ ಡೆಡ್ಲಿ ಕಾಂಬಿನೇಷನ್‌ನಲ್ಲಿ `ವೀರ ಕಂಬಳ’ ಚಿತ್ರ ಮೂಡಿ ಬಂದಿದೆ. ಗ್ಯಾಂಗ್‌ಸ್ಟರ್ ಪಾತ್ರಕ್ಕೆ ನಟ ಆದಿತ್ಯ ಜೀವತುಂಬಿದ್ದಾರೆ. ತುಳು ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರೋ ಕಂಬಳ ಜನಾಂಗವನ್ನು ಬೆಂಬಲಿಸುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ `ವೀರ ಕಂಬಳ’ ಚಿತ್ರದ ಬಹುತೇಕ ಚಿತ್ರೀಕರಣ ಮಂಗಳೂರಿನಲ್ಲಿ ನಡೆದಿದೆ. ಜತೆಗೆ ನಟ ಆದಿತ್ಯ ಅವರ ಚಿತ್ರದ ಫಸ್ಟ್ ಲುಕ್‌ನ್ನು ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಿದೆ ಚಿತ್ರತಂಡ. ಇದನ್ನೂ ಓದಿ: ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆʻವೀರ ಕಂಬಳʼ ಚಿತ್ರದಲ್ಲಿ ಲವ್‌ಸ್ಟೋರಿ ಜತೆ ಆ್ಯಕ್ಷನ್ ಕಥಾಹಂದರವಿರುವ ವಿಭಿನ್ನ ಚಿತ್ರವಾಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಇನ್ನು ಗ್ಯಾಂಗ್‌ಸ್ಟರ್ ಪಾತ್ರಕ್ಕೂ ಕಂಬಳದ ಎನು ಸಂಬಂಧ ಅಂತಾ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. ನಟ ಆದಿತ್ಯ ಅವರ ರೆಬೆಲ್ ಅವತಾರ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.Sign in to your account
Username or Email Address


Password

 Remember Me


