ಕಾರವಾರ: ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ಸಾಗಿಸುತ್ತಿದ್ದ 1.27 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.ಸಾಗರ-ಪಣಜಿ ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚೆಕ್‌ ಪೋಸ್ಟ್‌ನಲ್ಲಿ ನಡೆದಿದೆ. ಜೊತೆಗೆ ಆರೋಪಿಗಳ ಬಳಿ ಇದ್ದ 1.27 ಲಕ್ಷ ರೂ. ಮೌಲ್ಯದ ವಿವಿಧ ಬ್ರಾಂಡ್‍ನ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ಲಕ್ಷ ಉದ್ಯೋಗ ಸೃಷ್ಟಿಸುವ FMCG ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ: ಬೊಮ್ಮಾಯಿಶಿವಮೊಗ್ಗ ಮೂಲದ 35 ವರ್ಷದ ನಾಗರಾಜ, ಇಪ್ಪತೈದು ವರ್ಷದ ಸಾಗರ್ ಬಂಧಿತರಾಗಿದ್ದು, ಗೋವಾದಿಂದ ಶಿವಮೊಗ್ಗಕ್ಕೆ ಬ್ಯಾಗ್‍ನಲ್ಲಿ ವಿವಿಧ ಬ್ರಾಂಡ್‍ನ ಮದ್ಯವನ್ನು ತುಂಬಿಕೊಂಡು ಬಸ್‍ನಲ್ಲಿ ತೆರಳುತಿದ್ದರು. ಈ ವೇಳೆ ತಪಾಸಣೆ ನಡೆಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಮದ್ಯವನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಧ್ವನಿವರ್ಧಕಗಳ ವಿಚಾರವಾಗಿ ಬಿಜೆಪಿ ರಾಜಕೀಯ ಮಾಡ್ತಿದೆ: ಸಂಜಯ್ ರಾವತ್Sign in to your account
Username or Email Address


Password

 Remember Me


