ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು ಒಟ್ಟು 154 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ಪಾಸಿಟಿವಿಟಿ ರೇಟ್ ಶೇ.1.49ಕ್ಕೆ ಏರಿಕೆ ಕಂಡಿದೆ.ಬೆಂಗಳೂರಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ.3ರನ್ನು ದಾಟಿದೆ. ಇಂದು ಬೆಂಗಳೂರೊಂದರಲ್ಲೇ 142 ಕೇಸ್ ದಾಖಲಾಗಿವೆ. ಈ ಮೂಲಕ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,751ಕ್ಕೆ ಏರಿಕೆ ಕಂಡಿದೆ. ಆದರೆ ಮರಣ ಪ್ರಕರಣ ಮಾತ್ರ ಸ್ಥಿರವಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ಒಟ್ಟು 116 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಚಿನ್ನ, ಬೆಳ್ಳಿ ದರ ಭಾರೀ ಇಳಿಕೆಈವರೆಗೆ ರಾಜ್ಯದಲ್ಲಿ ಒಟ್ಟು 39,47,363 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,513 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 67,860 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,319 ಸ್ಯಾಂಪಲ್ (ಆರ್‌ಟಿಪಿಸಿಆರ್ 7,826 + 2,493 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕೊರೊನಾ 4ನೇ ಅಲೆ ಕಂಟ್ರೋಲ್‌ಗೆ ತಜ್ಞರ ವರದಿ ಕೇಳಿದ ಸರ್ಕಾರಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 142, ದಕ್ಷಿಣ ಕನ್ನಡ 2, ಕೋಲಾರ 2, ವಿಜಯಪುರ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾರವಾಡ, ಮಂಡ್ಯ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.






 Advertisement 




Sign in to your account
Username or Email Address


Password

 Remember Me


