ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಬಿಸಿಲಿಗೆ ತತ್ತರಿಸಿರುವ ಜಿಲ್ಲೆ ತಂಪಾಗಿದ್ದರು, ಬೆಳೆ ಕಟಾವು ಮಾಡಿದ್ದ ರೈತರು ಕಂಗಾಲಾಗಿದ್ದಾರೆ.ಜಿಲ್ಲೆಯ ಲಿಂಗಸುಗೂರು, ಹಟ್ಟಿ, ಮುದಗಲ್ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗಿದೆ. ಲಿಂಗಸುಗೂರು ತಾಲೂಕಿನ ಆಮದಿಹಾಳ ಗ್ರಾಮದ ಬಳಿಯ ರಾಯಚೂರು-ಬೆಳಗಾವಿ ಹೆದ್ದಾರಿಯಲ್ಲಿ ಬೃಹತ್ ಮರ ಧರೆಗುರುಳಿದೆ. ಗಾಳಿ ಸಹಿತ ಮಳೆ ಜೋರಾಗಿದ್ದರಿಂದ ಬೃಹತ್ ಮರ ಧರೆಗುರುಳಿದೆ.ಮರ ರಸ್ತೆಗೆ ಉರುಳಿ ಬಿದ್ದಿದ್ದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನೂ ಹಟ್ಟಿ ಪಟ್ಟಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆ ಸುರಿದಿದ್ದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ದಿಢೀರ್ ಮಳೆಯಿಂದ ಭತ್ತ ಕಟಾವು ಮಾಡಿದ್ದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.Sign in to your account
Username or Email Address


Password

 Remember Me


