ಮಂಡ್ಯ: ನಾನು ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗೆ ಮದ್ದೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮುಖಂಡರನ್ನು ಭೇಟಿಯಾದರೆ ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ ಎಂದು ತಿಳಿಸಿದರು.ಈ ಹಿಂದೆ ಮುಖಂಡರು ಹಿಂದೆ ಸಂಸದರ ನಿಧಿ ಬಗ್ಗೆ ಕೇಳಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ. ಈಗ ಸಂಸದರ ನಿಧಿ ಬಿಡುಗಡೆಯಾದ ಹಿನ್ನೆಲೆಯಲ್ಲಿ ನಿಧಿ ಬಗ್ಗೆ ತಿಳಿಸಲು ಸಭೆ ಕರೆದಿದ್ದೇನೆ ಹೊರತು ಬಿಜೆಪಿ ಸೇರುವ ಬಗ್ಗೆ ಅಲ್ಲ ಎಂದು ತಿಳಿಸಿದರು.ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಅವಶ್ಯಕತೆ ಇಲ್ಲ. ಈಗ ಚುನಾವಣೆಯೂ ಇಲ್ಲ ಅದರ ಪ್ರಸ್ತಾಪ ಇಲ್ಲ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಜನರು ಏನು ಹೇಳಿದ್ದಾರೋ ಅದನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದರು. ಇದನ್ನೂ ಓದಿ: ಬಾಡೂಟಕ್ಕೆ ಸ್ನೇಹಿತರ ಜೊತೆ ಹೋದವ ಶವವಾಗಿ ಪತ್ತೆಬೆಂಬಲಿಗರು ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ನನ್ನ ಬೆಂಬಲಿಗರು ಬಿಜೆಪಿ ಸೇರ್ಪಡೆ ಬಗ್ಗೆ ನಾನು ಏನು ಹೇಳುವುದಿಲ್ಲ. ಎಲ್ಲರೂ ಸ್ವತಂತ್ರರು ಯಾವ ಪಕ್ಷಕ್ಕಾದರೂ ಸೇರಬಹುದು. ನನ್ನ ಚುನಾವಣೆ ವೇಳೆ ಎಲ್ಲಾ ಪಕ್ಷದವರು ದುಡಿದಿದ್ದಾರೆ ಎಂದರು.ಪುತ್ರ ಅಭಿಷೇಕ್ ಚುನಾವಣೆ ಸ್ಪರ್ಧಿಸುತ್ತಾನೋ ಇಲ್ಲವೋ ಎನ್ನುವುದು ಆತನಿಗೆ ಬಿಟ್ಟ ವಿಚಾರ. ಸಿನಿಮಾಗೆ ಬಾ ಎಂದು ನಾವು ಹೇಳಿಲ್ಲ. ರಾಜಕೀಯ ಬಗ್ಗೆನೂ ನಾವು ಹೇಳಲ್ಲ. ಇದು ಆತನ ವೈಯಕ್ತಿಕ ವಿಚಾರ ಎಂದರು.Sign in to your account
Username or Email Address


Password

 Remember Me


