ದಿಢೀರ್ ಅನಾರೋಗ್ಯದ ಕಾರಣದಿಂದಾಗಿ ನಿನ್ನೆ ಮೈಸೂರಿನಲ್ಲಿ ನಿಧನ ಹೊಂದಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅವರ ತಾಯಿ ಪುಷ್ಪಾ ಅಂತ್ಯಕ್ರಿಯೆಯನ್ನು ಆನೆಕಲ್ ನಲ್ಲಿ ಮಾಡುವುದಾಗಿ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಅಂತ್ಯಕ್ರಿಯೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.  ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬತಾರಾ ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಸಿನಿಮಾ ರಂಗದ ಅನೇಕ ಗಣ್ಯರು ಮತ್ತು ರಾಜಕೀಯ ಮುಖಂಡರು ಆಗಮಿಸಿ ಅಂತಿಮ ದರ್ಶನ ಪಡೆದರು. ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. 76 ವರ್ಷದ ಪುಷ್ಪಾ ಅವರು ತಾರಾ ಅವರ ಜೊತೆ ಮೈಸೂರಿನಲ್ಲಿ ನಿನ್ನೆ ನಡೆದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣದ ವೇಳೆ ತೀವ್ರವಾಗಿ ವಾಂತಿಯಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿತಾರಾ ಅವರ ಜೊತೆಯೇ  ಯಾವಾಗಲೂ ಅವರ ತಾಯಿ ಇರುತ್ತಿದ್ದರು. ಶೂಟಿಂಗ್ ನಡೆಯುವ ಸ್ಥಳಕ್ಕೂ ಮಗಳೊಂದಿಗೆ ಪುಷ್ಪಾ ಅವರು ಹೋಗುತ್ತಿದ್ದರು. ಈ ಬಾರಿ ಹೋದಾಗ ಇಂಥದ್ದೊಂದು ದುರಂತ ಸಂಭವಿಸಿದೆ.Sign in to your account
Username or Email Address


Password

 Remember Me


