ಬೆಂಗಳೂರು: ಯುವತಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಬಳಿ ನಡೆದಿದೆ.23 ವರ್ಷದ ಯುವತಿ ಮೇಲೆ ಪಾಗಲ್ ಪ್ರೇಮಿ ನಾಗೇಶ್ ಆ್ಯಸಿಡ್ ದಾಳಿ ಮಾಡುವ ಮೂಲಕ ವಿಕೃತಿ ಮೆರೆದಿದ್ದಾನೆ. ತನ್ನನ್ನು ಪ್ರೀತಿಸುವಂತೆ ನಾಗೇಶ್ ಯುವತಿಯ ಬಿನ್ನು ಬಿದ್ದಿದ್ದ. ಆದರೆ ಈತನ ಪ್ರೀತಿಗೆ ಯುವತಿ ಸೊಪ್ಪು ಹಾಕಲಿಲ್ಲ. ಇದರಿಂದ ಸಿಟ್ಟಿಗೆದ್ದ ನಾಗೇಶ್, ಯುವತಿ ಮೇಲೆ ಆ್ಯಸಿಡ್ ಎರಚಿದ್ದಾನೆ.ಇಂದು ಬೆಳಗ್ಗೆ ಎಂಟೂವರೆ ಸುಮಾರಿಗೆ ಕೆಲಸಕ್ಕೆಂದು ಯುವತಿಯನ್ನು ಆಕೆಯ ತಂದೆ ಬೈಕ್‍ನಲ್ಲಿ ಕರೆದುಕೊಂಡು ಬಂದು ಡ್ರಾಪ್ ಮಾಡಿ ಹೋಗಿದ್ರು. ಯುವತಿ ತಂದೆ ಡ್ರಾಪ್ ಮಾಡಿ ಹೋದ ಕೆಲವೇ ಕ್ಷಣದಲ್ಲಿ ನಾಗೇಶ್ ಸೇಡು ತೀರಿಸಿಕೊಂಡಿದ್ದಾನೆ. ಘಟನೆಯಿಂದ ಗಾಯಗೊಂಡ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ಘಟನೆ ಬಳಿಕ ನಾಗೇಶ್ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಅತ್ಯಾಚಾರ – ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದ್ರೂ ಬಿಡದ ಪಾಪಿಗಳುಪ್ರೇಮಾಂಕುರವಾಗಿದ್ದು ಹೇಗೆ..?
ಯುವತಿ ಮೊದಲು ನಾಗೇಶ್ ಗಾರ್ಮೆಂಟ್ಸ್ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದಳು. ಆ ಸಂದರ್ಭದಲ್ಲಿ ಇಬ್ಬರಲ್ಲೂ ಪ್ರೇಮಾಂಕುರವಾಗಿತ್ತು. ಅಂತೆಯೇ ಕಳೆದ 7 ವರ್ಷದಿಂದ ಇಬ್ಬರೂ ಪ್ರೀತಿಸುತ್ತಾ ಇದ್ದರು. ಇದ್ದಕ್ಕಿದ್ದಂತೆ ಇಬ್ಬರ ನಡುವೆ ಬಿರುಕು ಉಂಟಾಗಿ ಲವ್ ಬ್ರೇಕ್ ಅಪ್ ಆಗಿತ್ತು. ನಿನ್ನೆ ಸಂಜೆ ಯುವತಿಯ ಆಫೀಸ್ ಬಳಿ ಹೋಗಿ ನಾಗೇಶ್‌ ಕ್ಯಾತೆ ತೆಗೆದಿದ್ದ. ನೀನು ನನ್ನನ್ನೇ ಮದುವೆಯಾಗಬೇಕು, ಇಲ್ಲ ಅಂದ್ರೆ ನಿನ್ನ ಜೀವಂತವಾಗಿ ಇರೋದಕ್ಕೆ ಬಿಡೋದಿಲ್ಲ  ಎಂದು ಬೆದರಿಕೆ ಹಾಕಿದ್ದ ಎಂಬ ಮಾಹಿತಿ ಲಭಿಸಿದೆ.ಮುಂದಿನ ತಿಂಗಳು 8 ರಂದು ಯುವತಿ ಅಕ್ಕನ ಮದುವೆ ನಿಶ್ಚಯ ಆಗಿತ್ತು. ಅದೇ ಸಂದರ್ಭದಲ್ಲಿ ಪ್ರಿಯತಮೆಯ ಮದುವೆ ಕೂಡ ಮಾತುಕತೆ ನಡೆದಿತ್ತು. ಒಟ್ಟಿನಲ್ಲಿ ಇದೀಗ ಯುವತಿ ಬೇರೊಬ್ಬರ ಮದುವೆ ಆಗುವ ಭಯಕ್ಕೆ ಇದೀಗ ನಾಗೇಶ್ ಯುವತಿ ಮೇಲೆ ಅಟ್ಯಾಕ್ ಮಾಡಿದ್ದಾನೆ.Sign in to your account
Username or Email Address


Password

 Remember Me


