ಧಾರವಾಡ: ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು ಪುಂಡಲೀಕ (43) ಎಂದು ಗುರುತಿಸಲಾಗಿದೆ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆಯಿಂದ ರೋಸಿ ಹೋಗಿದ್ದ ಮಗ, ಕೊನೆಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ತಟಸ್ಥ ಧೋರಣೆ ಯುದ್ಧವನ್ನು ನಿಲ್ಲಿಸಲು ಸಹಾಯ ಮಾಡಲ್ಲ: ಭಾರತಕ್ಕೆ ಉಕ್ರೇನ್ ಸೂಚನೆಬಾಲಕ ಇನ್ನೂ 17 ವರ್ಷದವನಾಗಿದ್ದು, ತಂದೆಯ ಜೊತೆ ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಜಗಳ ಮಾಡಿದ್ದ. ಆದರೂ ತಂದೆ ಕುಡಿದು ಬಂದು ಗಲಾಟೆ ಆರಂಭಿಸಿದಾಗ ತನ್ನ ಮನೆ ಎದುರಿನಲ್ಲಿಯೇ ಮಗ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೊರೊನಾ ಇನ್ನೂ ಮುಗಿದಿಲ್ಲ, ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ: ಉದ್ಧವ್ ಠಾಕ್ರೆSign in to your account
Username or Email Address


Password

 Remember Me


