ಬೆಂಗಳೂರು: ಆ್ಯಸಿಡ್ ದಾಳಿಗೊಳಗಾದ ಯುವತಿಯ ದೇಹ ಶೇ.42ರಿಂದ 50ರಷ್ಟು ಸುಟ್ಟು ಹೋಗಿದೆ ಎಂದು ಖಾಸಗಿ ಆಸ್ಪತ್ರೆ ವೈದ್ಯ ಕಾರ್ತಿಕ್ ಹೇಳಿದ್ದಾರೆ.ಯುವತಿಗೆ ಚಿಕಿತ್ಸೆ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಆ್ಯಸಿಡ್ ಅಟ್ಯಾಕ್ ಆಗಿ ಯುವತಿ ನಮ್ಮ ಆಸ್ಪತ್ರೆಗೆ ದಾಖಲಾಗಿದ್ರು. ಸುಟ್ಟ ಗಾಯದ ಕಂಟೆಂಟ್ ಚೆಕ್ ಮಾಡುತ್ತಿದ್ದೇವೆ. ಇನ್ನೂ ಗೊತ್ತಾಗ್ತಿಲ್ಲ ಎಂದರು. ಇದನ್ನೂ ಓದಿ: ಆ್ಯಸಿಡ್ ದಾಳಿ ಪ್ರಕರಣ, ಯುವತಿ ಪರಿಸ್ಥಿತಿ ಗಂಭೀರವಾಗಿದೆ: ಡಿಸಿಪಿ ಸಂಜೀವ್ ಪಾಟೀಲ್ಆಸ್ಪತ್ರೆಗೆ ಕರೆತಂದಾಗ ಆಕೆಗೆ ಬಿಪಿ ಲೋ ಇತ್ತು. ಕೂಡಲೇ ಚಿಕಿತ್ಸೆ ನೀಡಲಾಗಿದೆ. ಈಗ ಸ್ವಲ್ಪ ಇಂಪ್ರುಮೆಂಟ್ ಆಗಿದೆ. ದೇಹವು ಶೇಕಡ 42 ರಿಂದ 50 ರಷ್ಟು ಸುಟ್ಟಿದೆ. ತುರ್ತು ಚಿಕಿತ್ಸೆ ಏನ್ ಕೊಡಬೇಕೋ ಅದನ್ನ ನೀಡಲಾಗಿದೆ. ಅವರ ಪೋಷಕರು ಒತ್ತಾಯದ ಮೇರೆಗೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಕಾತೀಕ್ ತಿಳಿಸಿದರು.ನಡೆದಿದ್ದೇನು..?
7 ವರ್ಷಗಳಿಂದ ಪ್ರೀತಿಸುತ್ತಿದ್ದ ನಾಗೇಶ್ ಎಂಬಾತ ಇಂದು ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಪ್ರೀತಿ ನಿರಾಕರಿಸಿದ್ದಕ್ಕಾಗಿಯೇ ನಾಗೇಶ್ ಯುವತಿ ಮೇಲೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಇಂದು ಬೆಳಗ್ಗೆ ಎಂಟೂವರೆ ಸುಮಾರಿಗೆ ಕೆಲಸಕ್ಕೆಂದು ಯುವತಿ ತಂದೆ ಬೈಕ್‍ನಲ್ಲಿ ಕರೆದುಕೊಂಡು ಬಂದು ಮುತ್ತೂಟ್ ಫಿನ್ ಕಾರ್ಪ್ ಬಳಿ ಡ್ರಾಪ್ ಮಾಡಿ ಹೋಗಿದ್ರು. ಯುವತಿ ತಂದೆ ಡ್ರಾಪ್ ಮಾಡಿ ಹೋದ ಕೆಲವೇ ಕ್ಷಣದಲ್ಲಿ ನಾಗೇಶ್ ಸೇಡು ತೀರಿಸಿಕೊಂಡಿದ್ದಾನೆ.ಘಟನೆಯಿಂದ ಗಾಯಗೊಂಡ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಘಟನೆ ಬಳಿಕ ನಾಗೇಶ್ ಸ್ಥಳದಿಂದ ಪರಾರಿಯಾಗಿದ್ದು. ನಾಗೇಶ್‍ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ಆ್ಯಸಿಡ್ ಅಟ್ಯಾಕ್!Sign in to your account
Username or Email Address


Password

 Remember Me


