ಬೆಂಗಳೂರು: ಕೊರೊನಾ 4ನೇ ಅಲೆ ಭೀತಿಯ ಬೆನ್ನಲ್ಲೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಒಟ್ಟು 126 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ನಿನ್ನೆಗಿಂತ 41 ಪ್ರಕರಣಗಳು ಹೆಚ್ಚಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಇಂದು ಯಾವುದೇ ಮರಣ ಪ್ರಕರಣಗಳು ದಾಖಲಾಗಿಲ್ಲ.ಬೆಂಗಳೂರು ನಗರದಲ್ಲಿ ಇಂದು 114 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 1.16% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,713 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಇಂದು 99 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ‘ಪಾನ್ ಇಂಡಿಯಾ’ ಸ್ಟಾರ್‌ಗೆ ‘ಪ್ಯಾನ್ ಇಂಡಿಯಾ’ ಸ್ಟಾರ್ ಗುನ್ನಾ – ಸುದೀಪ್ ಬೆನ್ನಿಗೆ ನಿಂತ ಸ್ಯಾಂಡಲ್‍ವುಡ್ಈವರೆಗೆ ರಾಜ್ಯದಲ್ಲಿ ಒಟ್ಟು 39,47,209 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,397 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 93,531 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,801 ಸ್ಯಾಂಪಲ್ (ಆರ್‌ಟಿ ಪಿಸಿಆರ್ 8,348 + 2453 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಗೌತಮ್‌ ಅದಾನಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 114, ಚಿತ್ರದುರ್ಗ 2, ದಕ್ಷಿಣಕನ್ನಡ 1, ಧಾರವಾಡ 1, ಕೋಲಾರ 1, ಮೈಸೂರು 2, ತುಮಕೂರು 1 ಹಾಗೂ ವಿಜಯಪುರದಲ್ಲಿ 4 ಪಾಸಿಟಿವ್ ಕೇಸ್ ದಾಖಲಾಗಿದೆ. ಉಳಿದಂತೆ 22 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.Sign in to your account
Username or Email Address


Password

 Remember Me


