ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ‘ಬೆಳ್ಳಿ ಪರದೆಗೆ ಹೊಸದೊಂದು ಪರ್ವ’ ಎನ್ನುವ ಹೊಸ ಪೋಸ್ಟರ್ ವೊಂದನ್ನು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಾಕಿ ಕುತೂಹಲ ಮೂಡಿಸಿತ್ತು. ಏ.27 ರಂದು ಬೆಳಗ್ಗೆ 9.50ಕ್ಕೆ ಹೊಸ ಪರ್ವದ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿತ್ತು. ಈ ಸುದ್ದಿಯ ಜಾಡು ಹಿಡಿದು ಹೊರಟ ಪಬ್ಲಿಕ್ ಟಿವಿ ಡಿಜಿಟಲ್ ತಂಡಕ್ಕೆ ಹಲವು ಮಾಹಿತಿಗಳೂ ದೊರೆತವು. ಹಾಗಾಗಿ ನೆನ್ನೆಯೇ ಪಬ್ಲಿಕ್ ಟಿವಿಯಲ್ಲಿ ಯುವರಾಜ್ ಕುಮಾರ್ ಲಾಂಚ್ ಮಾಡುತ್ತಿರುವ ಕುರಿತು ಎರಡು ವರದಿಗಳನ್ನು ಮಾಡಲಾಗಿತ್ತು. ಅದೀಗ ನಿಜವಾಗಿದೆ.  ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿಪುನೀತ್ ರಾಜ್ ಕುಮಾರ್ ಅವರ ನಿನ್ನೆಂದಲೇ ಸಿನಿಮಾದ ಮೂಲಕ ಹೊಂಬಾಳೆ ಫಿಲ್ಮ್ಸ್ ಲಾಂಚ್ ಆಗಿತ್ತು. ಈಗ ಪುನೀತ್ ಅವರ ಸಹೋದರನ ಪುತ್ರ ಯುವರಾಜ್ ಕುಮಾರ್ ಲಾಂಚ್ ಮಾಡುವ ಮೂಲಕ ಆ ಪ್ರೀತಿಯ ಕೊಡುಕೊಳ್ಳುವಿಕೆ ಅರ್ಥಪೂರ್ಣ ಮುನ್ನುಡಿ ಬರೆದಿದೆ ಹೊಂಬಾಳೆ ಫಿಲ್ಮ್ಸ್. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟಪುನೀತ್ ರಾಜ್ ಕುಮಾರ್ ಉತ್ತರಾಧಿಕಾರಿ ಎಂದೇ ಬಿಂಬಿತವಾಗುತ್ತಿರುವ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಲಾಂಚ್ ಮಾಡುವ ಮೂಲಕ ಹೊಸ ಪರ್ವವನ್ನು ಹೊಂಬಾಳೆ ಫಿಲ್ಮ್ಸ್ ಮಾಡಿದೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನೂ ಅದು ನೀಡಿದೆ. ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಯುವರಾಜ್ ಕಾಂಬಿನೇಷನ್ ನಲ್ಲಿ ಹೊಂಬಾಳೆ ಫಿಲ್ಮ್ಸ್ ಹಲವು ಸಿನಿಮಾಗಳನ್ನು ಮಾಡಲಿದೆ ಎನ್ನುವ ಸುದ್ದಿಯಿತ್ತು. ಅದು ಈಗ ನಿಜವಾಗಿದೆ.  ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ 24 ರಂದು ಡಾ.ರಾಜ್ ಹುಟ್ಟು ಹಬ್ಬದಂದೇ ಈ ಹೊಸ ಸಿನಿಮಾದ ಘೋಷಣೆ ಆಗಲಿದೆ ಎಂದು ಸುದ್ದಿಯಿತ್ತು. ಅದು ಏ.27ಕ್ಕೆ ಆಗಿದೆ.Sign in to your account
Username or Email Address


Password

 Remember Me


