ಹುಬ್ಬಳ್ಳಿ: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯಲು ಸಾಧ್ಯವೇ ಇಲ್ಲ. ಅವಧಿ ಮುಗಿದ ಬಳಿಕವೇ ಚುನಾವಣೆ ನಡೆಯುತ್ತದೆ. ಪಂಚರಾಜ್ಯ ಚುನಾವಣೆಗೆ ನಿಗದಿತ ಸಮಯವಿತ್ತು. ಹೀಗಾಗಿ ಪಂಚರಾಜ್ಯ ಚುನಾವಣೆ ನಡೆದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದರು.ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ನಾವು ಗುಜರಾತ್ ಜೊತೆಗೆ ಚುನಾವಣೆ ನಡೆಸಲು ಮುಂದಾಗುವುದಿಲ್ಲ. ನಮ್ಮ ಅವಧಿ ಮುಗಿದ ಬಳಿಕವೇ ಚುನಾವಣೆ ನಡೆಯುತ್ತದೆ ಎಂದರು. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?ಸಿಎಂ ಬಸವರಾಜ ಬೊಮ್ಮಾಯಿ ಎರಡು ಕಡೆ ಸ್ಪರ್ಧಿಸಲಿರುವ ವಿಚಾರವಾಗಿ ಮಾತನಾಡಿದ ಶೆಟ್ಟರ್, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಇದು ಕೇವಲ ವದಂತಿಯಷ್ಟೇ. ಇನ್ನೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಮಾಧ್ಯಮದ ಊಹಾಪೋಹ ಎಂದು ತಿಳಿಸಿದರು. ಇದನ್ನೂ ಓದಿ: ಮಳೆಹಾನಿ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ನೀಡಬೇಕು: ಬಿ.ಸಿ.ಪಾಟೀಲ್ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಪಕ್ಷದಲ್ಲಿ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ. ಮುಂಬರುವ ಚುನಾವಣೆ ಹಿನ್ನೆಲೆ ಈಗಾಗಲೇ ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ ಎಂದರು.Sign in to your account
Username or Email Address


Password

 Remember Me


