ಬೆಂಗಳೂರು: ರಾಜ್ಯದಲ್ಲಿ ಕೊರೊನಾ 4ನೇ ಅಲೆ ಆರಂಭವಾಗುತ್ತಿದ್ದಂತೆ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇಂದು ಒಟ್ಟು 64 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಆದರೆ ಕೆಲ ದಿನಗಳಿಂದ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.ಬೆಂಗಳೂರು ನಗರದಲ್ಲಿ ಇಂದು 63 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ನಿಧಾನವಾಗಿ ನಗರದಲ್ಲಿ ಕೇಸ್‍ಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ರಾಜ್ಯದ ಪಾಸಿಟಿವಿಟಿ ರೇಟ್ 1.38% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,671ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ಒಟ್ಟು 69 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಸಂಚಾರದ ವೇಳೆ ಉಗುಳಿದರೂ ಬೀಳತ್ತೆ ದಂಡ: ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?ಈವರೆಗೆ ರಾಜ್ಯದಲ್ಲಿ ಒಟ್ಟು 39,46,998 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,228 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 53,699 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 4,637 ಸ್ಯಾಂಪಲ್ (ಆರ್​ಟಿಪಿಸಿಆರ್ 3,955 + 682 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕಿಡ್ನಿ ಹೆಸರಲ್ಲಿ ವಂಚನೆ ಮಾಡುತ್ತಿದ್ದ ವಂಚಕರು ಅರೆಸ್ಟ್ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 63 ಮತ್ತು ದಕ್ಷಿಣಕನ್ನಡದಲ್ಲಿ 1 ಪಾಸಿಟಿವ್ ಕೇಸ್ ದಾಖಲಾಗಿದೆ. ಉಳಿದಂತೆ 28 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.






 Advertisement 




Sign in to your account
Username or Email Address


Password

 Remember Me


