ಬೆಳಗಾವಿ: ಸ್ನೇಹಿತರೊಂದಿಗೆ ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳವಲಕೊಪ್ಪ ಗ್ರಾಮದಲ್ಲಿ ನಡೆದಿದೆ.ಜಿಲ್ಲೆಯ ಸವದತ್ತಿ ತಾಲೂಕಿನ ಹೊಸೂರ ಗ್ರಾಮದ ಯುವಕ ಅಕ್ಷಯ ಗುರುಸಿದ್ದಪ್ಪ ಕೋಟಗಿ (16) ಸಾವಿಗೀಡಾದ ಯುವಕ. ಈತ ಸವದತ್ತಿ ತಾಲೂಕಿನ ಬೆಳವಲಕೊಪ್ಪ ಗ್ರಾಮದ ಹೊರವಲಯದಲ್ಲಿ ಹಾಯ್ದು ಹೋಗಿರುವ ಮಲಪ್ರಭಾ ನದಿಯಲ್ಲಿ ಸ್ನೇಹಿತರ ಜೊತೆ ಈಜಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾನೆ.ಇತ್ತ ಯುವಕನ ಸಾವಿನ ಸುದ್ದಿ ಕೇಳಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸವದತ್ತಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


