ಬೆಂಗಳೂರು: ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು.ಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ಹಿಂದೆ ಅವರದೇ ಪಕ್ಷದ ಸಿಎಂ ಬದಲಾಯಿಸಲು ರಾಮನಗರ, ಕನಕಪುರದಲ್ಲಿ ಗಲಾಟೆ ಮಾಡಿಸುತ್ತಿದ್ದರು. ಡಿಜೆಹಳ್ಳಿ-ಕೆಜಿಹಳ್ಳಿಯಲ್ಲೂ ಅವರದೇ ಪಕ್ಷದ ಶಾಸಕನ ಮನೆಯನ್ನು, ಅವರದೇ ಪಕ್ಷದ ಮಾಜಿ ಮೇಯರ್‍ಗೆ ಬೆಂಕಿ ಹಾಕಿಸಿ, ಜೈಲಿಗೆ ಹೋಗಿದ್ದ ಎಂದು ಕಿಡಿಕಾರಿದರು. ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ಆಪ್ತರೆನ್ನಲಾದ ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿದೆ: ಆರಗಹುಬ್ಬಳ್ಳಿ ಗಲಾಟೆಯಲ್ಲೂ ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷನೇ ಭಾಗಿಯಾಗಿದ್ದಾನೆ. ಪಿಎಸ್‍ಐ ನೇಮಕಾತಿ ಹಗರಣದಲ್ಲೂ ಕಾಂಗ್ರೆಸ್ ಮುಖಂಡನೇ ಇದ್ದಾನೆ. ಹೀಗೆ ಅವರೇ ಎಲ್ಲ ಹಗರಣದಲ್ಲೂ ಭಾಗಿಯಾಗಿ ಉಳಿದವರ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಸರ್ವಪ್ರಯತ್ನ ಮಾಡುತ್ತಿದೆ. ವಿದೇಶಿ ಶಕ್ತಿಗಳು ಈ ಎಲ್ಲ ಘಟನೆಯಲ್ಲಿ ಭಾಗಿಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಬೇಕು ಎಂದರು.ಗಲಭೆಕೋರರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ, ನಮ್ಮಲ್ಲೂ ಯುಪಿ, ಮಧ್ಯಪ್ರದೇಶ ಮಾದರಿ ರೂಲ್ಸ್ ಬರಬೇಕಾದ ಸ್ಥಿತಿ ಬರುತ್ತಿದೆ. ಬುಲ್ಡೋಜರ್ ರೂಲ್ಸ್ ತಂದರೆ ಮಾತ್ರ ಕೃತ್ಯಗಳನ್ನು ಮಟ್ಟ ಹಾಕಲು ಸಾಧ್ಯ. ಗಲಭೆ ಸೃಷ್ಟಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಬುಲ್ಡೋಜರ್ ಬಳಸಿ ಆರೋಪಿಗಳ ಅಕ್ರಮ ಮನೆಗಳನ್ನು ತೆರವು ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ:  ರಾಜ್ಯದಲ್ಲಿ 139 ಜನರಿಗೆ ಕೊರೊನಾ – ಶೂನ್ಯ ಮರಣ ದರ ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಸುಮ್ಮನೆ ಬಿಡಬಾರದು. ಅವರ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಬೇಕು. ಈ ಬಗ್ಗೆ ನಾನು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ಮಾಡುತ್ತೇನೆ. ನಾವು ಇನ್ನಷ್ಟು ಕಠಿಣಕ್ರಮ ತೆಗೆದುಕೊಂಡು ದುಷ್ಟರ ಹೆಡೆಮುರಿ ಕಟ್ಟುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಅರಾಜಕತೆ ಉಂಟು ಮಾಡುವ ಕಾಂಗ್ರೆಸ್‍ಗೆ ತಕ್ಕ ಪಾಠ ಜನರೇ ಕಲಿಸುತ್ತಾರೆ ಎಂದು ಹೇಳಿದರು.Sign in to your account
Username or Email Address


Password

 Remember Me


