ಹಾವೇರಿ: 16 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ ಆರೋಪಿಯನ್ನು ಬೆತ್ತಲೆ ಮಾಡಿ ಕೈಗೆ ಹಗ್ಗ ಕಟ್ಟಿ ಊರಲ್ಲಿ ಮೆರವಣಿಗೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.ಆರೋಪಿಯನ್ನು ಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ ಹೊಡೆದು, ಹಗ್ಗ ಕಟ್ಟಿ ಊರಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿ ತಂದೆಯಿಂದ ಹನ್ನೊಂದು ಜನರ ಮೇಲೆ ಪ್ರತಿದೂರು ದಾಖಲು ಮಾಡಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಪೊಲೀಸರು ಜೈಲಿಗೆ ಕಳಿಸಿದ್ದಾರೆ. ಇದನ್ನೂ ಓದಿ: 11 ವರ್ಷದ ಬಾಲಕಿ ಮೇಲೆ 6 ಮಂದಿ ಅಪ್ರಾಪ್ತ ಬಾಲಕರಿಂದ ಅತ್ಯಾಚಾರಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಏಪ್ರಿಲ್ 21ರಂದು ನಡೆದ ಘಟನೆಯ ವೀಡಿಯೋ ವೈರಲ್ ಆಗಿದೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇದನ್ನೂ ಓದಿ: PSI ಪರೀಕ್ಷೆಗೆ ಬ್ಲೂಟೂತ್ ಮೂಲಕ ಉತ್ತರ ರವಾನೆSign in to your account
Username or Email Address


Password

 Remember Me


