ಬೆಂಗಳೂರು: ಪಿಎಸ್‍ಐ ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಆಪ್ತರೆನ್ನಲಾದ ಅವರದೇ ಪಕ್ಷದ ನಾಯಕರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಖರ್ಗೆ ಅವರು ತಮ್ಮ ಬಳಿ ಅಕ್ರಮಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಹಿಂದೆಯೇ ಸಲ್ಲಿಕೆಯಾಗಿದೆ ಎನ್ನಲಾದ ಒಂದು ಆಡಿಯೋ ರೆಕಾರ್ಡ್ ಅನ್ನು ಇಂದು ಬಿಡುಗಡೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಯೂನಿಫಾರ್ಮ್‌ ಹಾಕ್ಕೊಂಡು ಬಿಲ್ಡಪ್‌ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು. ಅದಕ್ಕೆ ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿದ್ದೇನೆ. ಈ ಕುರಿತು ಸಿಎಂ ಬೊಮ್ಮಾಯಿ ಅವರ ಜೊತೆ ಸಮಾಲೋಚಿಸಿ, ತನಿಖೆಗೆ ಆದೇಶ ನೀಡಿದ್ದೆ. ಆ ನಂತರ ಖರ್ಗೆ ಅವರು ಈ ಕುರಿತು ಒಂದು ಪತ್ರಿಕಾಗೋಷ್ಠಿ ಸಹ ನಡೆಸಿದ್ದರು. ಆದರೆ ಆಡಿಯೋ ರೆಕಾರ್ಡ್ ಬಗ್ಗೆ, ಮಾಹಿತಿ ನೀಡಿರಲಿಲ್ಲ. ಈಗ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಮಾಹಿತಿ ಹೊರಹಾಕಿದ್ದಾರೆ ಅಂತೇಳಿದ್ರು ಎಂದು ಆರೋಪಿಸಿದರು.ಇದೇ ವೇಳೆ ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ, ಇಟ್ಟುಕೊಂಡಿದ್ದರು ಎಂದು ಸಾರ್ವಜನಿಕರಿಗೆ ತಿಳಿಸಬೇಕು. ತಮ್ಮ ಬೆಂಬಲಿಗರು, ಸಿಐಡಿ ತನಿಖೆಯಲ್ಲಿ, ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯೂ ಇರಬಹುದು. ಈಗಲಾದರೂ ಖರ್ಗೆ ಅವರು, ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು ಮತ್ತು ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕು ಎಂದು ವಿನಂತಿಸುತ್ತೇನೆ ಎಂದರು.ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ಅಕ್ರಮಕ್ಕೆ ಒಳಗಾಗಿದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ. ಕಾಂಗ್ರೆಸ್ ನಾಯಕರು, ತನಿಖೆಗೆ ಸಹಕರಿಸಬೇಕು ಹಾಗೂ ಯಾವುದೇ ರೀತಿಯ ರಾಜಕೀಯ ಲಾಭ ಅಪೇಕ್ಷೆ ಮಾಡದೆ, ಅಕ್ರಮ ಎಸಗಿದವರನ್ನು ಕಾನೂನಿನ ಬಲೆಗೆ ತರಲು ಮುಂದಾಗಬೇಕು ಎಂದು ಆದೇಶ ಹೊರಡಿಸಿದರು. ಇದನ್ನೂ ಓದಿ:  ಸೈನಿಕರಿಗಾಗಿ ವೈದ್ಯಕೀಯ ಸಲಕರಣೆ ರವಾನೆ ಮಾಡಿದ ಇನ್ಫೋಸಿಸ್ ಕಂಪನಿ ಸಹ-ಸಂಸ್ಥಾಪಕ ಕೆ.ದಿನೇಶ್ Sign in to your account
Username or Email Address


Password

 Remember Me


