ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದೆ. ಇಂದು ಒಟ್ಟು 90 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಂದು ಕೂಡ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.ಬೆಂಗಳೂರು ನಗರದಲ್ಲಿ ಇಂದು 85 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ನಿಧಾನವಾಗಿ ನಗರದಲ್ಲಿ ಕೇಸ್‍ಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.85% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,595ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ಒಟ್ಟು 45 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ನಿಂದಿಸಿದ ಪ್ರಕರಣ: ಬೆಳ್ಳಾರೆಯ ಗಿರಿಧರ್ ರೈ ಜೈಲು ಶಿಕ್ಷೆಗೆ ಪುತ್ತೂರು ಕೋರ್ಟ್‌ನಿಂದ ತಡೆಈವರೆಗೆ ರಾಜ್ಯದಲ್ಲಿ ಒಟ್ಟು 39,46,735 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,041 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 55,399 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,552 ಸ್ಯಾಂಪಲ್ (ಆರ್‌ಟಿಪಿಸಿಆರ್ 8,236 + 2,316 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ದೇವಾಲಯ ಒಡೆದು ಮಸೀದಿ ನಿರ್ಮಾಣ ಮಾಡಿದ್ದಕ್ಕೆ ಸಾಕ್ಷ್ಯ ಮಂಗಳೂರಿನಲ್ಲಿ ಸಿಕ್ಕಿದೆ: ಸಿ.ಟಿ ರವಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 85, ಬೆಳಗಾವಿ, ಚಿತ್ರದುರ್ಗ, ದಕ್ಷಿಣಕನ್ನಡ, ಕೋಲಾರ ಮತ್ತು ಶಿವಮೊಗ್ಗದಲ್ಲಿ ತಲಾ 1 ಪಾಸಿಟಿವ್ ಕೇಸ್ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


