ಹಾವೇರಿ: ಕೊಬ್ಬರಿ ಹೋರಿ ತಿವಿದು ಯುವಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಬೆಟಕೆರೂರು ಗ್ರಾಮದಲ್ಲಿ ನಡೆದಿದೆ.ಷಣ್ಮುಖ ಹುಡೇದ(22) ಮೃತ ಯುವಕ ಎಂದು ಗುರುತಿಸಲಾಗಿದೆ. ಷಣ್ಮುಖ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ. ಗ್ರಾಮದ ಭೂತಪ್ಪನ ಗುಡ್ಡದ ಇಳಿಜಾರಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಕುಂಕುಮ ಇಟ್ಟವರು ಯಾರು ಬಾಂಬ್ ಹಾಕಿಲ್ಲ, ಬಾಂಬ್ ಹಾಕೋರು ಟೋಪಿ ಹಾಕಿದವರು: ಸಿ.ಟಿ ರವಿಹೋರಿ ಬೆದರಿಸುವ ಸ್ಪರ್ಧೆ ನೋಡುತ್ತಾ ನಿಂತಿದ್ದ ವೇಳೆ ಹೋರಿ ಓಡಿ ಬಂದು ಕೊಂಬಿನಿಂದ ಯುವಕನ ಹೊಟ್ಟೆಗೆ ತಿವಿದು ಯುವಕ ಗಂಭೀರ ಗಾಯಗೊಂಡಿದ್ದ. ಕೂಡಲೇ ಹಿರೇಕೆರೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ವೇಳೆ ಯುವಕ ಷಣ್ಮುಖ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಪೂರ್ವ ನಿಯೋಜಿತ ಸಂಚು, ನ್ಯಾಯಾಂಗ ತನಿಖೆ ನಡೆಯಲಿ: ಎಸ್‍ಡಿಪಿಐSign in to your account
Username or Email Address


Password

 Remember Me


