ಮೊನ್ನೆಯಷ್ಟೇ ರಾಮ್ ಗೋಪಾಲ್ ವರ್ಮಾ ಕನ್ನಡದ ನಟ ಉಪೇಂದ್ರ ಅವರಿಗಾಗಿ ಸಿನಿಮಾವೊಂದನ್ನು ಮಾಡುವುದಾಗಿ ಘೋಷಿಸಿದ್ದರು. ಈಗ ಆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಈ ಸಿನಿಮಾದ ಫಸ್ಟ್ ಲುಕ್ ರಿವೀಲ್ ಆಗಲಿದೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರಈ ಫಸ್ಟ್ ಲುಕ್ ರಿಲೀಸ್ ಕಾರ್ಯಕ್ರಮದ ವಿಶೇಷ ಅಂದರೆ, ರಾಮ್ ಗೋಪಾಲ್ ವರ್ಮಾ ಅವರು ಬಾಲಿವುಡ್ ಗೆ ಪರಿಚಯಿಸಿದ ಕನ್ನಡದ ಖ್ಯಾತ ನಟರೊಬ್ಬರು ಈ ಫಸ್ಟ್ ಲುಕ್ ಅನ್ನು ರಿಲೀಸ್ ಮಾಡಲಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ಗಣ್ಯರು ಮತ್ತು ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘನಾಳೆ ಸಂಜೆ ಹೊಸ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಆಗಲಿದ್ದು, ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ ಈ ಚಿತ್ರದ ಮೊದಲ ನೋಟವನ್ನು ಬಿಡುಗಡೆ ಮಾಡುತ್ತಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಿ.ಕೆ. ಶಿವಕುಮಾರ್, ಮಂತ್ರಿಗಳಾದ ಮುನಿರತ್ನ, ಆರ್.ಅಶೋಕ್, ಭೈರತಿ ಬಸವರಾಜು ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಈ ಚಿತ್ರವು ಮಾಜಿ ಡಾನ್ ಮುತ್ತಪ್ಪ ರೈ ಅವರ ಬದುಕನ್ನು ಆಧರಿಸಿದ್ದು ಎನ್ನಲಾಗುತ್ತಿದೆ. ಆದರೆ, ಈವರೆಗೂ ರಾಮ್ ಗೋಪಾಲ್ ವರ್ಮಾ ಆಗಲಿ ಅಥವಾ ಉಪೇಂದ್ರವಾಗಲಿ ಎಲ್ಲಿಯೂ ಹೇಳಿಕೊಂಡಿಲ್ಲ. ಕಥೆಯು ಸಣ್ಣದೊಂದು ಸುಳಿವು ಬಿಟ್ಟುಕೊಟ್ಟಿದ್ದು ಬಿಟ್ಟರೆ, ಬಹುಶಃ ನಾಳೆ ಒಂದಷ್ಟು ಮಾಹಿತಿಯು ಸಿಗಬಹುದು.Sign in to your account
Username or Email Address


Password

 Remember Me


