ಭಾಸ್ಕರ್ ಆರ್. ನೀನಾಸಂ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾದ ಟ್ರೇಲರ್ ಮತ್ತು ಫಸ್ಟ್ ಲುಕ್ ಈಗಾಗಲೇ ನೋಡುಗರ ಗಮನ ಸೆಳೆದಿವೆ. ಇದೀಗ ಸಿನಿಮಾದ ಒಂದು ಹಾಡನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ. ಇಂದು ಸಂಜೆ 5 ಗಂಟೆಗೆ ಲಹರಿ ಯೂಟ್ಯೂಬ್ ಚಾನೆಲ್ ನಲ್ಲಿ ‘ನಿನ್ನನ್ನೇ ನಿನ್ನನ್ನೇ’ ಸಾಂಗ್ ರಿಲೀಸ್ ಆಗಲಿದೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರಈಗಾಗಲೇ ನಟನಾಗಿ ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಭಾಸ್ಕರ್, ಇದೇ ಮೊದಲ ಬಾರಿಗೆ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು ಹಾಡುಗಳಿಗೂ ಅಷ್ಟೇ ಮಹತ್ವ ನೀಡಲಾಗಿದೆಯಂತೆ. ಹಾಗಾಗಿ ಸಿನಿಮಾದ ಮೊದಲ ಹಾಡನ್ನು ಇಂದು ಅಭಿಮಾನಿಗಳಿಗೆ ಅರ್ಪಿಸುತ್ತಿದ್ದಾರೆ ನಿರ್ದೇಶಕರು. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘಈ ಹಿಂದೆ ಸಿನಿಮಾದ ಪೋಸ್ಟರ್ ಅನ್ನು ಡಾಲಿ ಧನಂಜಯ್ ಮಾಡಿದ್ದರು. ಫಸ್ಟ್ ಲುಕ್ ಸಾಕಷ್ಟು ವೈರಲ್ ಆಗಿತ್ತು. ಇದೊಂದು ಭರವಸೆಯ ಸಿನಿಮಾ ಎನ್ನುವ ಗೌರವಕ್ಕೂ ಪಾತ್ರವಾಗಿತ್ತು. ಹಾಡು ಕೂಡ ಜನರ ಮನಸ್ಸನ್ನು ಗೆಲಲ್ಲಿದೆ ಎನ್ನುತ್ತಾರೆ ನಿರ್ದೇಶಕ ಭಾಸ್ಕರ್. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?ಮಗಳು ಜಾನಕಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ಮಾಡಿರುವ ರಾಕೇಶ್ ಮಯ್ಯ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು, ಗೊಂಬೆಗಳ ಲವ್ ಖ್ಯಾತಿಯ ಪಾವನಾ ನಾಯಕಿ. ಇಬ್ಬರೂ ಹೊಸ ರೀತಿಯ ಪಾತ್ರವನ್ನು ಈ ಸಿನಿಮಾದಲ್ಲಿ ನಿರ್ವಹಿಸಿದ್ದಾರಂತೆ. ಈ ಸಿನಿಮಾ ಇವರಿಬ್ಬರ ವೃತ್ತಿ ಬದುಕಿಗೆ ಮತ್ತೊಂದು ತಿರುವು ನೀಡಲಿದೆ ಎನ್ನುತ್ತಿದೆ ಚಿತ್ರತಂಡ. ಇದನ್ನೂ ಓದಿ : Love…ಲಿ ಅಂತಿದ್ದಾರೆ ಆಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹ: ಚಿಟ್ಟೆ ನ್ಯೂ ಲುಕ್‌ ಹೇಗಿದೆ ಗೊತ್ತಾ?ಹೆಸರಾಂತ ಕಲಾವಿದರೇ ಈ ಸಿನಿಮಾದಲ್ಲಿದ್ದು, ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ, ಜಾಹಂಗೀರ್ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿ ಇದ್ದಾರೆ. ಸಚಿನ್ ಬಸ್ರೂರ್ ಅವರ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ.Sign in to your account
Username or Email Address


Password

 Remember Me


