ಬೀದರ್: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಾಗೂ ಸಂಗ್ರಹಿಸಿಟ್ಟದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ಪಟ್ಟಣದ ಹೊರವಲಯದಲ್ಲಿ ನಡೆದಿದೆ.ಮಿನಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3ಲಕ್ಷ ಮೌಲ್ಯದ ಪಡಿತರ ಅಕ್ಕಿ ಹಾಗೂ ಅಕ್ರಮವಾಗಿ ದಾಸ್ತಾನಿನಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯ ಪಡಿತರ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.ಲಾರಿ ಚಾಲಕ ಹಾಗೂ ಪಡಿತರ ಅಕ್ಕಿ ತುಂಬಿದ್ದ ಮಿನಿ ಲಾರಿಯನ್ನು ಚಿಟ್ಟಗುಪ್ಪ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ಮಾಡಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಕಲ್ಲಿದ್ದಲು ಸರಬರಾಜಿನಲ್ಲಿ ವ್ಯತ್ಯಯವಿದೆ, ಕಾಂಗ್ರೆಸ್ ಆರೋಪಿಸಿದಷ್ಟು ಅಲ್ಲ: ಜೋಶಿಬೀದರ್‌ನಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಿ ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಖದೀಮರು ಮಾರಾಟ ಮಾಡುತ್ತಿದರು. ಈ ಕುರಿತು ಚಿಟ್ಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ: ಬೊಮ್ಮಾಯಿSign in to your account
Username or Email Address


Password

 Remember Me


