ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಹಿರೇಮಠ್ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.ಶುಕ್ರವಾರ ಬೆಳಗ್ಗೆ 10:15ಕ್ಕೆ ದ್ವಿತೀಯ ಪಿಯುಸಿಯ ಮೊದಲ ಪರೀಕ್ಷೆ ಎದುರಿಸಲಿರುವ ಅಭಿಷೇಕ್ ಪೊಲೀಸ್ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾನೆ. ಕಾಮರ್ಸ್ ವಿದ್ಯಾರ್ಥಿಯಾಗಿರುವ ಅಭಿಷೇಕ್ ಮಹೇಶ್ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಸ್ಟಡೀಸ್ ಪರೀಕ್ಷೆ ಬರೆಯಲಿದ್ದಾನೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಹಿಜಬ್‌ ಹೋರಾಟಗಾರ್ತಿಯರುಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಅಶೋಕನಗರದ ಉಪ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ಪರೀಕ್ಷೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‌ಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಸುಪ್ರಭಾತ ಸೇವೆಗೆ ಅನುಮತಿ ನೀಡಿ- ಹಿಂದೂ ಮುಖಂಡರಿಂದ ಮತ್ತೊಂದು ಬೇಡಿಕೆ Sign in to your account
Username or Email Address


Password

 Remember Me


