ಮಂಗಳೂರು: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಘಟನೆ ಬೆಳಕಿಗೆ ಬಂದಿದೆ.ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಗರದ ಗಾಂಧಿನಗರ ಎಂಬಲ್ಲಿ ನಡೆದಿದೆ. ಯುವಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಈತ ಹಾವೇರಿ ಮೂಲದವನು. ಯುವಕನ ಈ ಕೃತ್ಯಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ.ಯುವಕ ಲಾರಿಯಡಿಗೆ ಏಕಾಏಕಿ ಹಾರಿದ್ದನ್ನು ಗಮನಿಸಿದ ಚಾಲಕ ತಕ್ಷಣವೇ ಬ್ರೇಕ್ ಹಾಕಿದ್ದಾರೆ. ಈ ಮೂಲಕ ಬಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆಯಿಂದ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ಅರೆಸ್ಟ್ಮೈ ಝುಂ ಎನಿಸೋ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ – ವೃದ್ಧ ಸಾವು, ನಾಲ್ವರಿಗೆ ಗಾಯSign in to your account
Username or Email Address


Password

 Remember Me


